
ನವದೆಹಲಿ, 15 ನವೆಂಬರ್ (ಹಿ.ಸ.) :
ಆ್ಯಂಕರ್ : ಭಗವಾನ್ ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ಗೆ ಭೇಟಿ ನೀಡಲಿದ್ದು, ₹9,700 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಶಂಕುಸ್ಥಾಪನೆ ಮಾಡಲಿದ್ದಾರೆ.
ಮಧ್ಯಾಹ್ನ 12:45ಕ್ಕೆ ದೇವಮೋಗ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, 2:45ಕ್ಕೆ ದೇಡಿಯಾಪದದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಪ್ರಧಾನಿ ಮೋದಿ ಸೂರತ್‌ನಲ್ಲಿ ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪ್ರಗತಿಯನ್ನು ಸಹ ಪರಿಶೀಲಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa