ಸ್ಯಾಂಕಿ ಕೆರೆ ಉಳಿಸಿ, ಬೆಂಗಳೂರು ರಕ್ಷಿಸಿ ಸಹಿ ಅಭಿಯಾನಕ್ಕೆ ಚಾಲನೆ
ಬೆಂಗಳೂರು, 15 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಸುಂದರ ಪ್ರಕೃತಿಯನ್ನು ನಾಶ ಮಾಡಿ, ಕೆರೆಗಳನ್ನು ಹಾಳು ಮಾಡಿ, ಅವೈಜ್ಞಾನಿಕ ಮೇಲ್ಸೇತುವೆಗಳನ್ನು ನಿರ್ಮಿಸಲು ಸ್ಯಾಂಕಿ ಕೆರೆಯ ನಾಶಕ್ಕೆ ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಕೆರೆಯ
signature campaign


ಬೆಂಗಳೂರು, 15 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಸುಂದರ ಪ್ರಕೃತಿಯನ್ನು ನಾಶ ಮಾಡಿ, ಕೆರೆಗಳನ್ನು ಹಾಳು ಮಾಡಿ, ಅವೈಜ್ಞಾನಿಕ ಮೇಲ್ಸೇತುವೆಗಳನ್ನು ನಿರ್ಮಿಸಲು ಸ್ಯಾಂಕಿ ಕೆರೆಯ ನಾಶಕ್ಕೆ ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ಕೆರೆಯ ಸಂರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಸರ್ಕಾರದ ಅಧಿಕಾರಿಗಳೊಂದಿಗೆ ಸ್ಯಾಂಕಿ ಕೆರೆ ಪರಿಶೀಲನೆ ನಡೆಸಿ ಮಾತನಾಡಿದ ಅವರು,ರಾಜ್ಯ ಕಾಂಗ್ರೆಸ್ ಸರ್ಕಾರವು ಸ್ಯಾಂಕಿ ಕೆರೆಯ ಸುತ್ತ ಅವೈಜ್ಞಾನಿಕ ಮೇಲ್ಸೇತುವೆ ನಿರ್ಮಿಸಲು ಮುಂದಾಗಿದೆ. ಇದರಿಂದ ಕೆರೆಯ ಸ್ವರೂಪಕ್ಕೂ ಪರಿಸರ ಸಮತೋಲನಕ್ಕೂ ಅಪಾಯ ಉಂಟಾಗಲಿದೆ ಎಂದರು.

ಅಭಿಯಾನದಲ್ಲಿ ಕೇಂದ್ರ ಸಚಿವೆ ಮತ್ತು ಬೆಂಗಳೂರು ಉತ್ತರ ಸಂಸದರಾದ ಶೋಭಾ ಕರಂದ್ಲಾಜೆ, ಶಾಸಕರಾದ ಡಾ. ಅಶ್ವತ್ಥ್ ನಾರಾಯಣ, ಗೋಪಾಲಯ್ಯ, ಬಿಜೆಪಿ ಪದಾಧಿಕಾರಿಗಳು, ಪರಿಸರ ಹೋರಾಟಗಾರರು ಹಾಗೂ ನಾಗರಿಕರು ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande