
ವಿಜಯಪುರ, 16 ನವೆಂಬರ್ (ಹಿ.ಸ.) :
ಆ್ಯಂಕರ್ : ಕಬ್ಬು ಬೆಳೆಯಗಳ ಮಧ್ಯೆ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ 15 ಕೆಜಿ 100 ಗ್ರಾಂ ಹಸಿ ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿರುವ ಘಟನೆ ತಿಕೋಟಾ ತಾಲ್ಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಶೇಖರ ಶಿವಪ್ಪ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿ, ಅಂದಾಜು 6.ಲಕ್ಷ 40 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ಜಮೀನಿನ ಕಬ್ಬಿನ ಬೆಳೆ ಮಧ್ಯೆ ಹಸಿ ಗಾಂಜಾ ಗಿಡಗಳನ್ನು ಬೆಳೆದಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಆಪರ ಆಯುಕ್ತರು (ಅಪರಾಧ) , ಮತ್ತು ಜಂಟಿ ಉಪ ಆಯುಕ್ತರು ಬೆಳಗಾವಿ ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ವಿಜಯಪುರ , ಅಬಕಾರಿ ಉಪ ಅಧೀಕ್ಷಕರು ವಿಜಯಪುರ ಮಾರ್ಗದರ್ಶನ ದಲ್ಲಿ ಅಬಕಾರಿ ನಿರೀಕ್ಷಕ ಮಹಾದೇವ ಪೂಜಾರಿ ನೇತೃತ್ವದ ಸಿಬ್ಬಂದಿ ದಾಳಿ ಮಾಡಿ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿದ್ದಾರೆ. ಆರೋಪಿ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದು, ಆರೋಪಿ ವಿರುದ್ಧ ಎನ್ ಡಿ ಪಿ ಎಸ್ ಪ್ರಕರಣ ದಾಖಲಿಸಿಕೊಂಡಿದ್ದಾರೆ, ತನಿಖೆ ಮುಂದುವರಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅಬಕಾರಿ ಸಿಬ್ಬಂದಿಗಳಾದ ಮಾಳಪ್ಪ ಪೂಜಾರಿ, ಪ್ರಕಾಶ ಕುಂಬಾರ, ಅನೀಲ ಕುಂಬಾರ, ಯಲ್ಲಪ್ಪ ಭಜಂತ್ರಿ, ಗೃಹರಕ್ಷಕ ದಳದ ಸಿಬ್ಬಂದಿಗಳಾದ ಶಿವಬಸು, ಸಿದ್ದು ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande