
ಗ್ವಾಲಿಯರ್, 16 ನವೆಂಬರ್ (ಹಿ.ಸ.) :
ಆ್ಯಂಕರ್ : ಮಧ್ಯಪ್ರದೇಶದ ಗ್ವಾಲಿಯರ್-ಝಾನ್ಸಿ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಸುಮಾರು 6.30ರ ವೇಳೆಗೆ ಮಾಲ್ವಾ ಕಾಲೇಜಿನ ಎದುರು ವೇಗವಾಗಿ ಬಂದ ಫಾರ್ಚೂನರ್ ಕಾರು ಮರಳು ತುಂಬಿದ ಟ್ರ್ಯಾಕ್ಟರ್-ಟ್ರಾಲಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಯಿಂದ ಕಾರು ಟ್ರಾಲಿಯ ಕೆಳಗೆ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಕ್ಷಿತಿಜ್ ಅಲಿಯಾಸ್ ಪ್ರಿನ್ಸ್ ರಾಜಾವತ್, ರಾಜ್ ಪುರೋಹಿತ್, ಕೌಶಲ್ ಸಿಂಗ್ ಭಡೋರಿಯಾ, ಆದಿತ್ಯ ಅಲಿಯಾಸ್ ರಾಮ್ ಜಾಡೋನ್ ಮತ್ತು ಅಭಿಮನ್ಯು ಸಿಂಗ್ ತೋಮರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಗ್ವಾಲಿಯರ್‌ನವರಾಗಿದ್ದು, ಝಾನ್ಸಿಯಲ್ಲಿ ನಡೆದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದರು.
ಅಪಘಾತದ ಮಾಹಿತಿ ಬಂದ ತಕ್ಷಣ ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಕಾರನ್ನು ಕತ್ತರಿಸಿ ಶವಗಳನ್ನು ಹೊರತೆಗೆದಿದ್ದಾರೆ.
ಘಟನೆಯ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು, ಟ್ರ್ಯಾಕ್ಟರ್ ಚಾಲಕನ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa