ಜಿ. ನೀಲಕಂಠಪ್ಪ ಅವರಿಗೆ `ಬಳ್ಳಾರಿ ಜಿಲ್ಲಾ ಶ್ರೇಷ್ಠ ಸಹಕಾರಿ ರತ್ನ' ಪ್ರಶಸ್ತಿ
ಬಳ್ಳಾರಿ, 16 ನವೆಂಬರ್ (ಹಿ.ಸ.) : ಆ್ಯಂಕರ್ : ಸುದೀರ್ಘ ಕಾಲ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಹಕಾರಿ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಬಳ್ಳಾರಿ ಜನತಾ ಬಜಾರ್‍ನ ಮಾಜಿ ಅಧ್ಯಕ್ಷರಾಗಿರುವ ಜಿ. ನೀಲಕಂಠಪ್ಪ ಅವರಿಗೆ `ಬಳ್ಳಾರಿ ಜಿಲ್ಲಾ ಶ್ರೇಷ್ಠ ಸಹ
ಜಿ. ನೀಲಕಂಠಪ್ಪ ಅವರಿಗೆ `ಬಳ್ಳಾರಿ ಜಿಲ್ಲಾ ಶ್ರೇಷ್ಠ ಸಹಕಾರಿ ರತ್ನ' ಪ್ರಶಸ್ತಿ


ಬಳ್ಳಾರಿ, 16 ನವೆಂಬರ್ (ಹಿ.ಸ.) :

ಆ್ಯಂಕರ್ : ಸುದೀರ್ಘ ಕಾಲ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಹಕಾರಿ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಬಳ್ಳಾರಿ ಜನತಾ ಬಜಾರ್‍ನ ಮಾಜಿ ಅಧ್ಯಕ್ಷರಾಗಿರುವ ಜಿ. ನೀಲಕಂಠಪ್ಪ ಅವರಿಗೆ `ಬಳ್ಳಾರಿ ಜಿಲ್ಲಾ ಶ್ರೇಷ್ಠ ಸಹಕಾರಿ ರತ್ನ' ಪ್ರಶಸ್ತಿ ಘೋಷಣೆಯಾಗಿದೆ.

ಹೊಸಪೇಟೆಯಲ್ಲಿ ಸೋಮವಾರ ನಡೆಯಲಿರುವ ರಾಜ್ಯಮಟ್ಟದ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ 72ನೇ ಸಮ್ಮೇಳನದಲ್ಲಿ ಜಿ. ನೀಲಕಂಠಪ್ಪ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande