ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಗದಗ ಕನೆಕ್ಟ್ ಕಾರ್ಯಕ್ರಮ
ಗದಗ, 16 ನವೆಂಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿರುವ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗಾಗಿ ಗದಗ ಕನೆಕ್ಟ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲ
ಫೋಟೋ


ಗದಗ, 16 ನವೆಂಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿರುವ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗಾಗಿ ಗದಗ ಕನೆಕ್ಟ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚಾಲನೆ ನೀಡಿದರು.

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಸಾಧನೆ ಮಾಡಿ ಉನ್ನತ ಸ್ಥಾನ ಪಡೆಯುವಲ್ಲಿ ತಮ್ಮ ಜೀವನ ರೂಪಿಸಿಕೊಳ್ಳಬೇಕು. ಗುಣಮಟ್ಟದ ಶಿಕ್ಷಣ ಹಾಗೂ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದಲ್ಲಿ ವಿದ್ಯಾರ್ಥಿಗಳು ಉನ್ನತ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಮೆಹಬೂಬ ತುಂಬರಮಟ್ಟಿ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande