ಹಾಸನ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ
ಹಾಸನ, 16 ನವೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಸನ ಮೈ ಭಾರತ್ ಕೇಂದ್ರ (ಯುವ ವ್ಯವಹಾರಗಳ ಹಾಗೂ ಕ್ರೀಡಾ ಸಚಿವಾಲಯ) ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಘಟಕಗಳು- ಹಾಸನ ವಿಶ್ವವಿದ್ಯಾಲಯ, ಸ್ಕೌಟ್ಸ್ & ಗೈಡ್ಸ್, ಎನ್‌ಸಿಸಿ ಹಾಗೂ ಯುವಕ ಸಂಘ ಮತ್ತು
ಹಾಸನ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ


ಹಾಸನ, 16 ನವೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಸನ ಮೈ ಭಾರತ್ ಕೇಂದ್ರ (ಯುವ ವ್ಯವಹಾರಗಳ ಹಾಗೂ ಕ್ರೀಡಾ ಸಚಿವಾಲಯ) ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಘಟಕಗಳು- ಹಾಸನ ವಿಶ್ವವಿದ್ಯಾಲಯ, ಸ್ಕೌಟ್ಸ್ & ಗೈಡ್ಸ್, ಎನ್‌ಸಿಸಿ ಹಾಗೂ ಯುವಕ ಸಂಘ ಮತ್ತು ಯುವತಿ ಮಂಡಳಿ ಇವರುಗಳ ಸಂಯಕ್ತಾಶ್ರಯದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್‌ರವರ 150ನೇ ಜನ್ಮ ದಿನೋತ್ಸವದ ಪ್ರಯುಕ್ತ ಹಾಸನ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮವನ್ನು ನ. 17 ರಂದು ಬೆಳಗ್ಗೆ 10 ಗಂಟೆಗೆ ರೈಲ್ವೆ ಸ್ಟೇಷನ್ ಆವರಣದಲ್ಲಿ ಏರ್ಪಡಿಸಲಾಗಿದೆ.

ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು ಘನ ಉಪಸ್ಥಿತಿವಹಿಸಲಿದ್ದಾರೆ. ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಉಪಸ್ಥಿತಿವಹಿಸಲಿದ್ದಾರೆ, ಶಾಸಕರಾದ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ಸಭೆ ಸದಸ್ಯರಾದ ಜಗ್ಗೇಶ್, ಸಂಸದರಾದ ಶ್ರೇಯಸ್ ಎಂ.ಪಟೇಲ್, ಶಾಸಕರುಗಳಾದ ಹೆಚ್.ಡಿ.ರೇವಣ್ಣ, ಡಾ.ಸಿ.ಎನ್.ಬಾಲಕೃಷ್ಣ, ಎ.ಮಂಜು, ಹೆಚ್.ಕೆ.ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಡಾ.ಸೂರಜ್ ರೇವಣ್ಣ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande