
ಬಳ್ಳಾರಿ, 16 ನವೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ತಾಲೂಕಿನ ಜಹಗೀರ ಹಿರೇಬಗನಾಳ ಗ್ರಾಮದ ಆರಾಧ್ಯ ದೇವ ಶ್ರೀ ಗವಿಸಿದ್ದೇಶ್ವರ ಮಹಾ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ರವಿವಾರ ಸಂಜೆ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ಅರ್ಚಕರಿಂದ ವಿಶೇಷ ಪೂಜೆ, ಅಭಿಷೇಕ ವಿವಿಧ ಪೂಜಾ ವಿಧಾನಗಳು ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ದೇವಸ್ಥಾನದ ಆವರಣದಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಜೆ ಆರಂಭಗೊಂಡ ಮಹಾರಥೋತ್ಸವ ಪಾದಗಟ್ಟೆವರೆಗೂ ಬಂದು ಯಶಸ್ವಿಯಾಗಿ ಗವಿಸಿದ್ದೇಶ್ವರ ದೇವಸ್ಥಾನ ತಲುಪಿತು.
ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಜಯ ಘೋಷಗಳನ್ನು ಹಾಕಿದರು. ಭಜನಾ ಮಂಡಳಿ ಸದಸ್ಯರಿಂದ ಭಜನೆ ನಡೆಯಿತು ಅಲಂಕೃತ ಗೊಂಡ ಮಹಾರಥೋತ್ಸವಕ್ಕೆ ಭಕ್ತರು ಉತ್ತತ್ತಿ, ಬಾಳೆಯನ್ನು ಎಸೆದು ಭಕ್ತಿ ಸಮರ್ಪಿಸಿದರು.
ಮಹಾರಥೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪಿಡಿಒ, ಸಂಘ ಸಂಸ್ಥೆಗಳ ಮುಖಂಡರು, ಗಣ್ಯರು ನಗರ, ಪಟ್ಟಣ, ಗ್ರಾಮಾಂತರ ಪ್ರದೇಶಗಳ, ಗ್ರಾಮದ ಸರ್ವ ಭಕ್ತರು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್