ನ. 18 ರಂದು ತಾಳಗುಪ್ಪದಲ್ಲಿ ಜನಸ್ಪಂದನಾ ಕಾರ್ಯಕ್ರಮ
ಶಿವಮೊಗ್ಗ, 16 ನವೆಂಬರ್ (ಹಿ.ಸ.) : ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನ. 18 ರಂದು ಮಧ್ಯಾಹ್ನ 1.30ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತಾಳಗುಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹೋಬಳಿ ಮಟ್ಟದ ಸಾ
ನ. 18 ರಂದು ತಾಳಗುಪ್ಪದಲ್ಲಿ ಜನಸ್ಪಂದನಾ ಕಾರ್ಯಕ್ರಮ


ಶಿವಮೊಗ್ಗ, 16 ನವೆಂಬರ್ (ಹಿ.ಸ.) :

ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನ. 18 ರಂದು ಮಧ್ಯಾಹ್ನ 1.30ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತಾಳಗುಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹೋಬಳಿ ಮಟ್ಟದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ ಕುರಿತು ಪರಿಹಾರ ನೀಡಲು “ಜನಸ್ಪಂದನಾ “ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಾಗರ ತಾಲೂಕು ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಗತ್ಯ ಮಾಹಿತಿಯೊಂದಿಗೆ ತಮ್ಮ ಕಚೇರಿಯ ಯಾವುದೇ ಪ್ರತಿನಿಧಿಯನ್ನು ನಿಯೋಜಿಸದೆ ತಾವೇ ಖುದ್ದಾಗಿ ತಪ್ಪದೇ ಹಾಜರಿದ್ದು ತಮ್ಮ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿಯನ್ನು ನೀಡುವಂತೆ ಸಾಗರ ತಾಲೂಕು ತಹಶೀಲ್ದಾರ್‌ರವರು ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande