
ಹಾಸನ, 16 ನವೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ರೈತರಿಗೆ, ರೈತ ಮಹಿಳೆಯರಿಗೆ ಹಾಗೂ ಆಸಕ್ತಿಯುಳ್ಳ ಎಲ್ಲರಿಗೂ ಪಶು ಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಹಾಸನ ವತಿಯಿಂದ ನ.18 ಮತ್ತು 19 ರಂದು ರೈತರಿಗೆ ಆಧುನಿಕ ಕುರಿ ಮತ್ತು ಮೇಕೆ ಸಾಕಣಿಕೆ ತರಬೇತಿಯನ್ನು ಏರ್ಪಡಿಸಲಾಗಿದೆ.
ತರಬೇತಿಯಲ್ಲಿ ಭಾಗವಹಿಸುವ ಶಿಭಿರಾರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ಸ್ಟೈಫಂಡ್ ನೀಡಲಾಗುವುದಿಲ್ಲ. ಆಸಕ್ತಿಯುಳ್ಳವರು ಆಧಾರ್ ಕಾರ್ಡ್, ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿ ಹಾಗೂ ಎರಡು ಭಾವಚಿತ್ರದೊಂದಿಗೆ ತರಬೇತಿ ಪ್ರಾರಂಭವಾಗುವ ದಿನಾಂಕದಂದು ಬೆಳಿಗ್ಗೆ 10.30 ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಬಿ.ಎಂ ರಸ್ತೆ ಸಂತೇಪೇಟೆ, ಹಾಸನದಲ್ಲಿ ಹಾಜರಾಗಬೇಕೆಂದು ಸೂಚಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172-235226 ಸಂಪರ್ಕಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa