ಇಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ; ವ್ಯಾಪಕ ಭದ್ರತೆ
ಕಲಬುರಗಿ, 16 ನವೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಆರ್‌ಎಸ್‌ಎಸ್‌ ಪಥ ಸಂಚಲನ ಇಂದು ನಡೆಯಲಿದೆ. ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ನಡೆಯಲಿರುವ ಪಥ ಸಂಚಲನ ಕಳೆದ ಒಂದು ತಿಂಗಳಿಂದ ರಾಷ್ಟ್ರ ಮಟ್ಟದಲ್ಲಿ ಚರ್ಚ
Rss


ಕಲಬುರಗಿ, 16 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಆರ್‌ಎಸ್‌ಎಸ್‌ ಪಥ ಸಂಚಲನ ಇಂದು ನಡೆಯಲಿದೆ. ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ನಡೆಯಲಿರುವ ಪಥ ಸಂಚಲನ

ಕಳೆದ ಒಂದು ತಿಂಗಳಿಂದ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಕಲಬುರಗಿ ಉಚ್ಚ ನ್ಯಾಯಾಲಯ ಆರ್‌ಎಸ್‌ಎಸ್ ಪಥ ಸಂಕಲನಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಸಿದ್ಧತೆ ನಡೆದಿದೆ.

ಇಂದು ಪಥಸಂಚಲನಕ್ಕೆ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಮಧ್ಯಾಹ್ನ 3:30ಕ್ಕೆ 300 ಜನ ಗಣವೇಷಧಾರಿಗಳು, ೫೦ ಜನ ಬ್ಯಾಂಡ್ ವಾದಕರು ಭಾಗವಹಿಸಲಿದ್ದಾರೆ. ಚಿತ್ತಾಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು. ಒಂದೂವರೆ ಕಿಲೋಮೀಟರ್ ಪಥ ಸಂಚಲನ ನಡೆಯಲಿದೆ.

ಈಗಾಗಲೇ ಆರ್‌ಎಸ್‌ಎಸ್ ಸಕಲ ಸಿದ್ದತೆ ಮಾಡಿಕೊಂಡಿದ್ದು, ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಅಂಬೇಡ್ಕರ್ ವೃತ್ತ, ಕೆನರಾ ಬ್ಯಾಂಕ್ ಸರ್ಕಲ್ ಮಾರ್ಗವಾಗಿ ಎಪಿಎಂಸಿವರೆಗೂ ಪಥ ಸಂಚಲನ ನಡೆಯಲಿದೆ.

ಪಥ ಸಂಚಲನ ಸಾಗುವ ಮಾರ್ಗದಲ್ಲಿ 800ಕ್ಕೂ ಹೆಚ್ಚು ಪೊಲೀಸರ ಭದ್ರತೆ ನಿಯೋಜಿಸಲಾಗಿದೆ.

ಆರ್‌ಎಸ್‌ಎಸ್‌ ಪಥ ಸಂಕಲನಕ್ಕೆ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸಂಘ ಪರಿವಾರ ನ್ಯಾಯಾಲಯದ ಮೆಟ್ಟಿಲೆರಿತ್ತು. ಆರ್‌ಎಸ್‌ಎಸ್ ಕೋರ್ಟ್ ಮೆಟ್ಟಿಲೇರುತ್ತಿದ್ದಂತೆ ಭೀಮ್ ಆರ್ಮಿ ಸೇರಿದಂತೆ ಹತ್ತಕ್ಕೂ ಹೆಚ್ಚು ಸಂಘಟನೆಗಳು ತಮಗು ಮೆರವಣಿಗೆ ಮಾಡಲು ಅವಕಾಶ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು. ಇದ್ರಿಂದ ದೊಡ್ಡ ಮಟ್ಟದ ಜಿದ್ದಾಜಿದ್ದಿ ನಡೆದಿತ್ತು. ಸದ್ಯ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಸುರ್ಧಿರ್ಘ ವಾದ ವಿವಾದಗಳ ನಂತರ ನ್ಯಾಯಾಲಯದ ಸೂಚನೆ ಮೇರೆಗೆ ಜಿಲ್ಲಾಡಳಿತ ಇಂದು ಪಥ ಸಂಚಲನಕ್ಕೆ ಅನುಮತಿ ನೀಡಿದೆ.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಚಿತ್ತಾಪುರ ಪಟ್ಟಣದಲ್ಲಿ ಪೊಲೀಸರು ಈಗಾಗಲೇ ರೂಟ್‌ಮಾರ್ಚ್ ಮಾಡಿದ್ದಾರೆ. ಚಿತ್ತಾಪುರದಲ್ಲಿ ಪಥ ಸಂಚಲನ ನಡೆಯುವ ಬಜಾಜ್ ಕಲ್ಯಾಣ ಮಂಟಪದ ಬಳಿ ತಲಾ ಒಂದು ಕೆಎಸ್‌ಆರ್‌ಪಿ, ಡಿಎಆರ್ ತುಕಡಿ ಸೇರಿ 650 ಜನ ಪೊಲೀಸರು ಹಾಗೂ 250 ಜನ ಹೋಮ್ ಗಾರ್ಡ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಲಬುರಗಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಡಿವೈಎಸ್ಪಿ ನೈತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿದೆ. ಪಥಸಂಚಲನ ಹಿನ್ನೆಲೆ ಚಿತ್ತಾಪುರ ಪಟ್ಟಣದಾದ್ಯಂತ ಸಿಸಿಟಿವಿ ಕ್ಯಾಮೆರಾ ಹಾಗೂ ಡ್ರೋನ್‌ ಕ್ಯಾಮೆರಾ ಕೂಡ ಬಳಕೆ ಮಾಡಲಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande