ಬಿಳಿ ಜೋಳ ಖರೀದಿಗೆ ನೋಂದಣಿ ಪ್ರಾರಂಭ
ಧಾರವಾಡ, 16 ನವೆಂಬರ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಬಿಳಿ ಜೋಳ ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿ ಏಜೆನ್ಸಿಯಾಗಿ ನೇಮಕವಾಗಿದೆ. ಜಿಲ್ಲೆಯಲ್ಲಿ ಐದು ಖರೀದಿ ಕೇಂದ್ರ
ಬಿಳಿ ಜೋಳ ಖರೀದಿಗೆ ನೋಂದಣಿ ಪ್ರಾರಂಭ


ಧಾರವಾಡ, 16 ನವೆಂಬರ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಬಿಳಿ ಜೋಳ ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿ ಏಜೆನ್ಸಿಯಾಗಿ ನೇಮಕವಾಗಿದೆ. ಜಿಲ್ಲೆಯಲ್ಲಿ ಐದು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

ಬಿಳಿ ಜೋಳ (ಹೈಬ್ರಿಡ್) ಪ್ರತಿ ಕ್ವೀಂಟಲ್‍ಗೆ ರೂ.3,699 ಹಾಗೂ ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವೀಂಟಲ್‍ಗೆ ರೂ.3,749 ರಂತೆ ದರ ನಿಗದಿ ಪಡಿಸಲಾಗಿದೆ. ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ನವಲಗುಂದ, ಕುಂದಗೋಳ ಮತ್ತು ಕಲಘಟಗಿ ತಾಲೂಕುಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. ಪ್ರತಿ ರೈತರಿಂದ ಹಿಡುವಳಿಯನ್ನು ಆಧರಿಸಿ ಪ್ರತಿ ಎಕರೆಗೆ 15 ಕ್ವೀಂಟಲ್ ನಂತೆ ಗರಿಷ್ಟ 150 ಕ್ವೀಂಟಲ್ ಬಿಳಿ ಜೋಳವನ್ನು ಖರೀದಿಸಲಾಗುವುದು.

ಆಸಕ್ತ ರೈತರು ಬಯೋಮೆಟ್ರಿಕ್ ಮೂಲಕ ಮಾರ್ಚ 30, 2026 ರವರೆಗೆ ನೊಂದಣಿ ಮಾಡಬೇಕು ಎಂದು ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande