
ಧಾರವಾಡ, 16 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳ ಇತರೆ ಜಾತಿಗಳ ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರು ಆನ್‍ಲೈನ್ https://kscbcselfdeclaratioin.karnataka.gov.in/ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನವೆಂಬರ್ 30, 2025 ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಸಮಿತಿಯ ಸದಸ್ಯ ಕಾರ್ಯದರ್ಶಿ ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa