ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ತಾರಾನಾಥ ಶಿಕ್ಷಣ ಸಂಸ್ಥೆ ವಿಶ್ವಾಸಾರ್ಹ ಶಿಕ್ಷಣ ಸಂಸ್ಥೆ
ರಾಯಚೂರು, 16 ನವೆಂಬರ್ (ಹಿ.ಸ.) : ಆ್ಯಂಕರ್ : ಮಕ್ಕಳು ಶಿಕ್ಷಣ ಕಲಿಕೆಗೆ ಪೂರಕ ಸೌಲಭ್ಯಗಳಿಲ್ಲದ ಸಂದರ್ಭದಲ್ಲಿ ತಾರಾನಾಥ ಶಿಕ್ಷಣ ಸಂಸ್ಥೆ ಈ ಭಾಗದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದೆ. ನಿರಂತರವಾಗಿ ಸುಮಾರು 6-7 ದಶಕಗಳ ಕಾಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ತಾರಾ
ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ತಾರಾನಾಥ ಶಿಕ್ಷಣ ಸಂಸ್ಥೆ  ವಿಶ್ವಾಸಾರ್ಹ ಶಿಕ್ಷಣ ಸಂಸ್ಥೆ


ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ತಾರಾನಾಥ ಶಿಕ್ಷಣ ಸಂಸ್ಥೆ  ವಿಶ್ವಾಸಾರ್ಹ ಶಿಕ್ಷಣ ಸಂಸ್ಥೆ


ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ತಾರಾನಾಥ ಶಿಕ್ಷಣ ಸಂಸ್ಥೆ  ವಿಶ್ವಾಸಾರ್ಹ ಶಿಕ್ಷಣ ಸಂಸ್ಥೆ


ರಾಯಚೂರು, 16 ನವೆಂಬರ್ (ಹಿ.ಸ.) :

ಆ್ಯಂಕರ್ : ಮಕ್ಕಳು ಶಿಕ್ಷಣ ಕಲಿಕೆಗೆ ಪೂರಕ ಸೌಲಭ್ಯಗಳಿಲ್ಲದ ಸಂದರ್ಭದಲ್ಲಿ ತಾರಾನಾಥ ಶಿಕ್ಷಣ ಸಂಸ್ಥೆ ಈ ಭಾಗದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದೆ. ನಿರಂತರವಾಗಿ ಸುಮಾರು 6-7 ದಶಕಗಳ ಕಾಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ತಾರಾನಾಥ ಶಿಕ್ಷಣ ಸಂಸ್ಥೆ ಕಾರ್ಯ ಶ್ಲಾಘನೀಯವಾಗಿದೆ ಅಲ್ಲದೆ ಜಿಲ್ಲೆಯಲ್ಲಿ ಮೊದಲಬಾರಿಗೆ ಕಾನೂನು ಮಹಾವಿದ್ಯಾಲಯ ಸ್ಥಾಪಿಸಿದ ಕೀರ್ತಿ ಈ ಸಂಸ್ಥೆಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು‌.

ರಾಯಚೂರಿನ ಎಲ್ ವಿ ಡಿ ಮಹಾವಿದ್ಯಾಲಯದಲ್ಲಿ ನಡೆದ ಕಲ್ಯಾಣ ಕರ್ನಾಟಕ ಭಾಗದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ರಾಯಚೂರಿನ ತಾರಾನಾಥ್ ಶಿಕ್ಷಣ ಸಂಸ್ಥೆಯ ಲಕ್ಷ್ಮೀ ವೆಂಕಟೇಶ ದೇಸಾಯಿ ಮಹಾವಿದ್ಯಾಲಯದ ಅಮೃತಮಹೋತ್ಸವ ಹಾಗೂ ಬಂಕಟಲಾಲ್ ರಾಜಾರಾಮ್ ಬೂಲ್ ವಾಣಿಜ್ಯ ಮಹಾವಿದ್ಯಾಲಯದ ವಜ್ರಮಹೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಚಿವರಾದ ಎನ್ ಎಸ್ ಬೋಸರಾಜು ಅವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಲಕ್ಷ್ಮೀ ವೆಂಕಟೇಶ ದೇಸಾಯಿ, ವೆಂಕಟಲಾಲ್ ಬೂಬ್ ಸೇರಿ ಅನೇಕ ಭೂ-ದಾನಿಗಳು ತನು-ಮನ ಧನ ಸಹಾಯದಿಂದ ಪ್ರಸ್ತುತ ದಿ. ನಾಗಪ್ಪ, ಹಾಗೂ ಅದ್ಯಕ್ಷರಾದ ಪಾರಸಮಾಲ್ ಸುಖಾಣಿ ಅವರ ಅದ್ಯಕ್ಷತೆಯಲ್ಲಿ ನಡೆಯುತ್ತಿರುವ ಸಂಸ್ಥೆಯಲ್ಲಿ ಪ್ರತಿ ವರ್ಷ 5000 ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮಟ್ಟಕ್ಕೆ ಶಿಕ್ಷಣ ಸಂಸ್ಥೆ ಬೆಳೆಯಬೇಕಾದರೆ ದಾನಿಗಳ ಪಾತ್ರ ದೊಡ್ಡದು ಎಂದು ತಿಳಿಸಿದರು.

ತಾರಾನಾಥ ಶಿಕ್ಷಣ ಸಂಸ್ಥೆ ಪ್ರಾರಂಭದಿಂದಲು ಈ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದೆ. ಈ ಭಾಗದ ವಿದ್ಯಾರ್ಥಿಗಳು ಕಾನೂನು ಪದವಿ ಪಡೆಯಬೇಕಾದರೆ ದಾರವಾಡ, ಬೆಂಗಳೂರಿನಂತಹ ಮಹಾನಗರಗಳಿಗೆ ತೆರಳಬೇಕಾಗಿತ್ತು ಅಂತ ಸಂದರ್ಭದಲ್ಲಿ ಇಲ್ಲಿಯೇ ಕಾನೂನು ಮಹಾ ವಿದ್ಯಾಲಯ ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಈ ತಾರಾನಾಥ ಶಿಕ್ಷಣ ಸಂಸ್ಥೆ ಹೆಸರುವಾಸಿಯಾಗಿದೆ. ಈ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸರ್ಕಾರಿ ಹುದ್ದೆ ಹಾಗೂ ಖಾಸಗಿ ಕ್ಷೇತ್ರದಲ್ಲಿಯೂ ದೇಶದಾದ್ಯಂತ ಕೆಲಸ ಮಾಡುತ್ತಿದ್ದಾರೆ ಎಂದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಮಾರೋಪ ನುಡಿಕಾರರಾಗಿ ಆಗಮಿಸಿದ ಮಹರ್ಶಿ ವಾಲ್ಮೀಕಿ ವಿದ್ಯಾಲಯದ ಡಾ. ಎ ಚನ್ನಪ್ಪ, ತಾರಾನಾಥ ಶಿಕ್ಷಣ ಸಂಸ್ಥೆಯ ಅದ್ಯಕ್ಷರಾದ ಪಾರಸ್ಮಾಲ್ ಸುಖಾಣಿ, ಕಾರ್ಯದರ್ಶಿ ಅಂಬಾಪತಿ ಪಾಟೀಲ್, ಪುರುಷೋತ್ತಮ, ಜಟ್ರಮ್ ಶ್ರೀನಿವಾಸ್, ಚೇತನ್ ದೋಖಾ, ಜಯಣ್ಣ, ಕೆ ಶಾಂತಪ್ಪ, ರುದ್ರಪ್ಪ ಅಂಗಡಿ, ಜಿ ಶಿವಮೂರ್ತಿ, ಅಬ್ದುಲ್ ಕರೀಮ್ ಸೇರಿದಂತೆ ಅನೇಕರು ಉಪಸ್ಥಿರಿದ್ದರು‌‌.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande