
ಬಳ್ಳಾರಿ, 17 ನವೆಂಬರ್ (ಹಿ.ಸ.) :
ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಎಂಎಸ್‍ಎಂಇ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸಿಸುವುದು (ಆರ್‍ಎಎಂಪಿ) ಯೋಜನೆಯಡಿ ನವೆಂಬರ್ 19 ರ ಬುಧವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಉದ್ಯಮಶೀಲತಾ ಚಟುವಟಿಕೆಗಳನ್ನು ಬೆಂಬಲಿಸಲು, ಪೋಷಿಸಲು ಹಾಗೂ ಸ್ಥಳೀಯ ಮಟ್ಟದ ಎಂಎಸ್‍ಎಂಇ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರ (ಬಿಡಿಎಸ್‍ಪಿ) ಬಗ್ಗೆ ಒಂದು ದಿನದ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರದಲ್ಲಿ ಉದ್ಯಮಿದಾರರಿಗೆ ವ್ಯಾಪರ ಅವಕಾಶಗಳ ಕುರಿತು ಮಾರ್ಗದರ್ಶನ ವ್ಯವಹಾರ ಯೋಜನೆ ಸಿದ್ದತೆಗೆ ಸಹಕಾರ, ತಂತ್ರಜ್ಞಾನದ ಉನ್ನತೀಕರಣ ಮತ್ತು ಗುಣಮಟ್ಟದ ಪ್ರಮಾಣೀಕರಣಕ್ಕೆ ಬೆಂಬಲ, ವಿಳಂಬಿತ ಪಾವತಿಗಳ ಸಮಸ್ಯೆಗಳ ಬಗ್ಗೆ ಹಾಗೂ ಬ್ರಾಂಡಿಂಗ್, ರಫ್ತು ಪ್ರಚಾರದ ಕುರಿತು ಜಾಗೃತಿ ಮೂಡಿಸಲಾಗುತ್ತದೆ.
ಆಸಕ್ತಿಯುಳ್ಳ ಉದ್ದಿಮೆದಾರರು ಪಾಲ್ಗೊಳ್ಳಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್