

ಬೆಂಗಳೂರು, 17 ನವೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಿದ್ದಾರೆ.
ಕಬ್ಬು ಬೆಳೆಗೆ ವೈಜ್ಞಾನಿಕ ದರ ನಿಗದಿ, ಬೆಳೆ ಹಾನಿ ಪರಿಹಾರ, ನೀರಾವರಿ ಯೋಜನೆಗಳಿಗೆ ಶೀಘ್ರ ಅನುಮೋದನೆ ನೀಡುವಂತೆ ಭೇಟಿ ವೇಳೆ ಪ್ರಧಾನಿ ಅವರಿಗೆ ಮನವಿ ಸಲ್ಲಿಸಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ದೆಹಲಿಗೆ ತಲುಪಲಿರುವ ಅವರು ಸಂಜೆ 5 ಘಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವರು. ರಾತ್ರಿ 7 ಘಂಟೆಗೆ ದೆಹಲಿಯಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ದೆಹಲಿ ಭೇಟಿ ಸಂದರ್ಭದಲ್ಲಿ ಸಚಿವ ಸಂಪುಟ ಪುನರ್ ರಚನೆ ಸೇರಿದಂತೆ ಕರ್ನಾಟಕದ ರಾಜಕೀಯ ವಿಷಯಗಳ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಗಳು ಇವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa