
ಕೊಪ್ಪಳ, 17 ನವೆಂಬರ್ (ಹಿ.ಸ.)
ಆ್ಯಂಕರ್: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಭಾಗವಹಿಸುವ ಅಭ್ಯರ್ಥಿಗಳು ನವೆಂಬರ್ 25 ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕೆಂದು ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ತಿಳಿಸಿದ್ದಾರೆ.
ಮಕ್ಕಳು ಮತ್ತು ಯುವ ಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾಪ್ರತಿಭೋತ್ಸವ ಕಾರ್ಯಕ್ರಮವನ್ನು ನ. 28 ಮತ್ತು 29 ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.
ಬಾಲ ಪ್ರತಿಭೆ ಸ್ಪರ್ಧೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ 8 ವರ್ಷ ತುಂಬಿರಬೇಕು. 14 ವರ್ಷಕ್ಕಿಂತ ಕಡಿಮೆಯಿರಬೇಕು. ಏಕವ್ಯಕ್ತಿ ಸ್ಪರ್ಧೆಗಳಲ್ಲಿ ಬಾಲ ಪ್ರತಿಭೆ ಸ್ಪರ್ಧೆ (ಕಲಾಪ್ರಕಾರಗಳು ಹಾಗೂ ನಿಗದಿ ಪಡಿಸಿದ ಸಮಯ) ಶಾಸ್ತ್ರೀಯ ನೃತ್ಯ-10 ನಿಮಿಷ, ಸುಗಮ ಸಂಗೀತ-7 ನಿಮಿಷ, ಚಿತ್ರಕಲೆ-120 ನಿಮಿಷ, ಜಾನಪದ ಗೀತ-7 ನಿಮಿಷ, ಹಿಂದೂಸ್ಥಾನ/ ಕರ್ನಾಟಕ ವಾದ್ಯ ಸಂಗೀತ-7 ನಿಮಿಷ ಹಾಗೂ ಹಿಂದೂಸ್ಥಾನ/ ಕರ್ನಾಟಕ ಶಾಸ್ತ್ರೀಯ ಸಂಗೀತ-7 ನಿಮಿಷ ನಿಗದಿಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯು ವಯೋಮಿತಿಯ ದೃಢೀಕರಣಕ್ಕಾಗಿ ಶಾಲೆಯಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಹಾಗೂ ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಯಿತಿ, ನಗರಸಭೆ, ಪುರಸಭೆ ಅಥವಾ ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು.
ಕಿಶೋರ ಪ್ರತಿಭೆ ಸ್ಪರ್ಧೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ 14 ವರ್ಷ ತುಂಬಿರಬೇಕು. 18 ವರ್ಷಕ್ಕಿಂತ ಕಡಿಮೆಯಿರಬೇಕು. ಏಕವ್ಯಕ್ತಿ ಸ್ಪರ್ಧೆಗಳಲ್ಲಿ ಕಿಶೋರ ಪ್ರತಿಭೆ ವಿಭಾಗದ ಸ್ಪರ್ಧೆ (ಕಲಾಪ್ರಕಾರಗಳು ಹಾಗೂ ನಿಗದಿ ಪಡಿಸಿದ ಸಮಯ) ಶಾಸ್ತ್ರೀಯ ನೃತ್ಯ-10 ನಿಮಿಷ ಸುಗಮ ಸಂಗೀತ-7 ನಿಮಿಷ, ಚಿತ್ರಕಲೆ-120 ನಿಮಿಷ, ಜಾನಪದ ಗೀತ-7 ನಿಮಿಷ, ಹಿಂದೂಸ್ಥಾನ/ಕರ್ನಾಟಕ ವಾದ್ಯ ಸಂಗೀತ-7 ನಿಮಿಷ, ಹಾಗೂ ಹಿಂದೂಸ್ಥಾನ/ ಕರ್ನಾಟಕ ಶಾಸ್ತ್ರೀಯ ಸಂಗೀತ-7 ನಿಮಿಷ, ನಿಗದಿಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯು ವಯೋಮಿತಿಯ ದೃಢೀಕರಣಕ್ಕಾಗಿ ಶಾಲೆಯಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಹಾಗೂ ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಯಿತಿ, ನಗರಸಭೆ, ಪುರಸಭೆ ಅಥವಾ ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು.
ಯುವ ಪ್ರತಿಭೆ ಸ್ಪರ್ಧೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ 18 ವರ್ಷ ತುಂಬಿರಬೇಕು. 30 ವರ್ಷಕ್ಕಿಂತ ಕಡಿಮೆಯಿರಬೇಕು. ಏಕವ್ಯಕ್ತಿ ಸ್ಪರ್ಧೆಗಳಲ್ಲಿ ಯುವ ಪ್ರತಿಭೆ ವಿಭಾಗದ ಸ್ಪರ್ಧೆ (ಕಲಾಪ್ರಕಾರಗಳು ಹಾಗೂ ನಿಗದಿ ಪಡಿಸಿದ ಸಮಯ) ನನ್ನ ಮೆಚ್ಚಿನ ಸಾಹಿತಿ (ಆಶುಭಾಷಣ)- 7 ನಿಮಿಷ, ಶಾಸ್ತ್ರೀಯ ನೃತ್ಯ-10 ನಿಮಿಷ, ಸುಗಮ ಸಂಗೀತ-7 ನಿಮಿಷ, ಹಿಂದೂಸ್ಥಾನ/ ಕರ್ನಾಟಕ ಶಾಸ್ತ್ರೀಯ ಸಂಗೀತ-7 ನಿಮಿಷ ಚಿತ್ರಕಲೆ-120 ನಿಮಿಷ ಹಾಗೂ ಹಿಂದೂಸ್ಥಾನ/ ಕರ್ನಾಟಕ ವಾದ್ಯ ಸಂಗೀತ-7 ನಿಮಿಷ ನಿಗದಿಪಡಿಸಲಾಗಿದೆ ಹಾಗೂ ಯುವ ಪ್ರತಿಭೆಗಳ ಸಮೂಹ ಸ್ಪರ್ಧೆ ನಾಟಕ-45 ನಿಮಿಷ (ತಂಡದಲ್ಲಿ ಕನಿಷ್ಠ 10 ಗರಿಷ್ಠ 15 ಜನ ಸದಸ್ಯರು ಮೀರಿರಬಾರದು), ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯು ವಯೋಮಿತಿಯ ದೃಢೀಕರಣಕ್ಕಾಗಿ ಕಾಲೇಜಿನಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಹಾಗೂ ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಯಿತಿ, ನಗರಸಭೆ, ಪುರಸಭೆ ಅಥವಾ ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು.
*ಬಹುಮಾನಗಳು:* ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆ ಸ್ಪರ್ಧೆಯ ಎಲ್ಲಾ ಸ್ಪರ್ಧಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ನೀಡುವುದು, ಆದರೆ ಜಿಲ್ಲಾ ಮಟ್ಟದಲ್ಲಿ ಹಾಗೂ ವಲಯ ಮಟ್ಟದಲ್ಲಿ ಯಾವುದೇ ನಗದು ಬಹುಮಾನ ಇರುವುದಿಲ್ಲ. ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವೀತಿಯ ಮತ್ತು ತೃತೀಯ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ಕ್ರಮವಾಗಿ ರೂ. 15 ಸಾವಿರ, 10 ಸಾವಿರ & 7,500 ಗಳನ್ನು ನಗದು ಬಹುಮಾನವನ್ನು ಹಾಗೂ ಪ್ರಮಾಣ ಪತ್ರವನ್ನು ನೀಡಲಾಗುವುದು.
ಸಮೂಹ ಪ್ರಕಾರಗಳಲ್ಲಿ ಭಾಗವಹಿಸುವ ತಂಡದ ಸದಸ್ಯರು ಸಂಖ್ಯೆ ಕನಿಷ್ಠ 10 ಗರಿಷ್ಠ 15 ಜನರನ್ನು ಮೀರಿರಬಾರದು. ವಲಯ ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ಧೆಗಳೊಂದಿಗೆ ಆಗಮಿಸುವ ನಾಟಕ ನಿರ್ದೇಶಕ, ಪಕ್ಕವಾದ್ಯ, ಸಹ ಕಲಾವಿದರಿಗೆ ವಾಸ್ತವಿಕ ಪ್ರಯಾಣ ವೆಚ್ಚ ಊಟ, ವಸತಿ ಹಾಗೂ ಪ್ರಮಾಣ ಪತ್ರವನ್ನು ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವಿತಿಯ ಮತ್ತು ತೃತೀಯ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ಕ್ರಮವಾಗಿ ರೂ. 50 ಸಾವಿರ, 40 ಸಾವಿರ ಮತ್ತು 30 ಸಾವಿರ ರೂ.ಗಳ ನಗದು ಬಹುಮಾನವನ್ನು ನೀಡಲಾಗುವುದು.
ಕಲಾ ಪ್ರತಿಭೋತ್ಸವದಲ್ಲಿ ಒಬ್ಬ ಸ್ಪರ್ಧಿಯು ಒಂದಕ್ಕಿಂತ ಹೆಚ್ಚಿನ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಆಸಕ್ತ ಅರ್ಹ ವಯೋಮಾನದ ವಿದ್ಯಾರ್ಥಿಗಳು, ಕಲಾವಿದರು, ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಅರ್ಜಿಯಲ್ಲಿ ಕಲಾ ಪ್ರಕಾರದ ವಿವರವನ್ನು ಸ್ಪಷ್ಟವಾಗಿ ನಮೂದಿಸಿ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿಗೆ ಖುದ್ದಾಗಿ ನ. 25 ರೊಳಗೆ ತಮ್ಮ ಸ್ವ-ವಿವರದೊಂದಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್