
ಬೀದರ್, 17 ನವೆಂಬರ್ (ಹಿ.ಸ.):
ಆ್ಯಂಕರ್:
ಬೀದರದಲ್ಲಿನ ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ವಿಭಾಗೀಯ ಹಳೆಯ ಕಚೇರಿ ಶಿಥಿಲಾವಸ್ಥೆಗೆ ತಲುಪಿದ್ದು, ಸಾರ್ವಜನಿಕರು ಹಾಗೂ ಸಿಬ್ಬಂದಿಗೆ ಅನೇಕ ತೊಂದರೆಗಳಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ₹10 ಕೋಟಿಗಳ ಅನುದಾನದಲ್ಲಿ ನೂತನ ಕಚೇರಿ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು.
ಆಧುನಿಕ ಸೌಲಭ್ಯಗಳಿಂದ ಕೂಡಿರುವ ಈ ನೂತನ ಕಟ್ಟಡ ನಿರ್ಮಾಣವಾದ ನಂತರ, ವಿದ್ಯುಚ್ಛಕ್ತಿ ಸೇವೆಯ ದಕ್ಷತೆ ಹೆಚ್ಚುತ್ತಿದ್ದು, ಜನತೆಗೆ ಸುಗಮ ಹಾಗೂ ಗುಣಮಟ್ಟದ ಸೇವೆ ಲಭಿಸುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಂಡ್ರೆ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa