ಮದೀನಾ ಅಪಘಾತ ; ಸಾವನ್ನಪ್ಪಿದ ಭಾರತೀಯರಿಗೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ, 17 ನವೆಂಬರ್ (ಹಿ.ಸ.) : ಆ್ಯಂಕರ್ : ಸೌದಿ ಅರೇಬಿಯಾದ ಮದೀನಾ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಭಾರತೀಯರು ಸಾವನ್ನಪ್ಪಿದ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಳವಾದ ದುಃಖ ವ್ಯಕ್ತಪಡಿಸಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ಮೋದಿ, “ಮದೀನಾದಲ್ಲಿ ಭಾರತೀಯ ಪ
Pm condolences


ನವದೆಹಲಿ, 17 ನವೆಂಬರ್ (ಹಿ.ಸ.) :

ಆ್ಯಂಕರ್ : ಸೌದಿ ಅರೇಬಿಯಾದ ಮದೀನಾ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಭಾರತೀಯರು ಸಾವನ್ನಪ್ಪಿದ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಳವಾದ ದುಃಖ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ಮೋದಿ,

“ಮದೀನಾದಲ್ಲಿ ಭಾರತೀಯ ಪ್ರಜೆಗಳು ಸಾವನ್ನಪ್ಪಿದ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.

ಅಪಘಾತದ ನಂತರ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಜೆಡ್ಡಾದ ಕಾನ್ಸುಲೇಟ್ ತ್ವರಿತ ಕಾರ್ಯಾಚರಣೆ ಕೈಗೊಂಡಿದ್ದು, ಸಂತ್ರಸ್ತರಿಗೆ ಅಗತ್ಯ ಸಹಾಯ ಒದಗಿಸಲಾಗುತ್ತಿದೆ, ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande