
ನವದೆಹಲಿ, 17 ನವೆಂಬರ್ (ಹಿ.ಸ.) :
ಆ್ಯಂಕರ್ : ಸೌದಿ ಅರೇಬಿಯಾದ ಮದೀನಾ ಬಳಿ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯುತ್ತಿದ್ದ ಬಸ್ ಭೀಕರವಾಗಿ ದುರಂತಕ್ಕೀಡಾದ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಡಾ. ಜೈಶಂಕರ್ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಕಟಣೆ ನೀಡಿದ್ದು,
“ಮದೀನಾದಲ್ಲಿ ಭಾರತೀಯ ಯಾತ್ರಿಕರನ್ನು ಒಳಗೊಂಡಿರುವ ಅಪಘಾತದಿಂದ ಆಘಾತಗೊಂಡಿದ್ದೇನೆ. ರಿಯಾದ್ ರಾಯಭಾರ ಕಚೇರಿ ಮತ್ತು ಜಿದ್ದಾದ ಕಾನ್ಸುಲೇಟ್ ಜನರಲ್ ಸಂತ್ರಸ್ತರು ಹಾಗೂ ಅವರ ಕುಟುಂಬಗಳಿಗೆ ಸಂಪೂರ್ಣ ಸಹಾಯ ಮಾಡುತ್ತಿದೆ” ಎಂದು ತಿಳಿಸಿದ್ದಾರೆ.
ಅಪಘಾತದ ನಂತರ, ಜಿದ್ದಾದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದು, ಅದು 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಯಾವುದೇ ಮಾಹಿತಿ ಅಥವಾ ಸಹಾಯಕ್ಕಾಗಿ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದು:
📞 ಟೋಲ್-ಫ್ರೀ ಸಂಖ್ಯೆ: 8002440003
ಭಾರತ ಸರ್ಕಾರ, ಸೌದಿ ಅಧಿಕಾರಿಗಳು ಮತ್ತು ಉಮ್ರಾ ಏಜೆನ್ಸಿಗಳು ಒಟ್ಟಾಗಿ ಮಾಹಿತಿ ಸಂಗ್ರಹಿಸುತ್ತಿದ್ದು, ಬಲಿಪಶುಗಳ ಕುಟುಂಬಗಳಿಗೆ ನೆರವು ನೀಡಲು ಸಮನ್ವಯ ಕಾರ್ಯ ಆರಂಭವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa