ಬಿಂಕದಕಟ್ಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಹೆಚ್ ಕೆ ಪಾಟೀಲ ಭೂಮಿ ಪೂಜೆ
ಗದಗ, 17 ನವೆಂಬರ್ (ಹಿ.ಸ.) ಆ್ಯಂಕರ್:- ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಅಂದಾಜು 25 ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ನಿರ್ಮಾಣ, ತಾರಿಕೊಪ್ಪದವರ ಹೊಲದ ಹತ್ತಿರ 25 ಲಕ್ಷ ರೂಗಳ ವೆಚ್ಚದಲ್ಲಿ ಗಟಾರು ಹಾಗೂ ಸಿಡಿ ನಿರ್ಮಾಣ, 15 ಲಕ್ಷ ರೂಗಳ ವೆಚ್
ಫೋಟೋ


ಗದಗ, 17 ನವೆಂಬರ್ (ಹಿ.ಸ.)

ಆ್ಯಂಕರ್:- ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಅಂದಾಜು 25 ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ನಿರ್ಮಾಣ, ತಾರಿಕೊಪ್ಪದವರ ಹೊಲದ ಹತ್ತಿರ 25 ಲಕ್ಷ ರೂಗಳ ವೆಚ್ಚದಲ್ಲಿ ಗಟಾರು ಹಾಗೂ ಸಿಡಿ ನಿರ್ಮಾಣ, 15 ಲಕ್ಷ ರೂಗಳ ವೆಚ್ಚದಲ್ಲಿ ಶಾಂಬರ ರಸ್ತೆಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕಾನೂನು ಹಾಗೂ ಸಂಸರದೀಯ ವ್ಯವಹಾರಗಳ ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಅಭಿವೃದ್ಧಿ ಕಾರ್ಮಿಕ ಕಾಮಗಾರಿಗಳಿಂದ ಗ್ರಾಮಗಳು ಸುಂದರ ಹಾಗೂ ಅಭಿವೃದ್ಧಿ ಪಥದತ್ತ ಸಾಗುವ ಲ್ಲಿ ಮಹತ್ವದ ಹೆಜ್ಜೆಗೆ ನೀಡುತ್ತಿವೆ ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಮಾದರಿಯಾಗಿ ತನ್ನ ವಿನೂತನ ಕಾರ್ಯಕ್ರಮಗಳ ಮೂಲಕ ವಿಶೇಷತೆಯನ್ನು ಹೊಂದಿರುವ ಬಿಂಕದಕಟ್ಟಿ ಗ್ರಾಮ ಪಂಚಾಯಿತಿ ಇನ್ನು ಹೆಚ್ಚು ಅಭಿವೃದ್ಧಿಗೊಳ್ಳಲು ಎಲ್ಲರೂ ರಚನಾತ್ಮಕ ಕಾರ್ಯಗಳಲ್ಲಿ ಕೈಜೋಡಿಸುವ ಮೂಲಕ ಗ್ರಾಮದ ಬೆಳವಣಿಗೆಗೆ ಸಹಕಾರಿ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಆನಂದಸ್ವಾಮಿ‌ ಗಡ್ಡದ್ದೇವರಮಠ, ರವಿ ಮೂಲಿಮನಿ, ಅಪ್ಪಣ್ಣ ಇನಾಮತಿ, ಸಿಬಿ ದೊಡ್ಡಗೌಡ್ರೆ, ಬಿ ಆರ್ ದೇವರೆಡ್ಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ ಪರಪ್ಪನವರ, ಉಪಾಧ್ಯಕ್ಷ ದ್ಯಾಮವ್ವ ಆರಟ್ಟಿ ಸದಸ್ಯರಾದ ತರದರೆಡ್ಡಿ ರಂಗಪ್ಪನವರ, ಪತ್ತೆ ಸಾಬ ನದಾಫ, ವೆಂಕಟೇಶ್ ಕುನಿ, ಮಂಜುನಾಥ ಮಕಳಿ, ಭೀಮವ್ವ ಬೇವಿನಕಟ್ಟಿ, ಲಕ್ಷ್ಮಿ ಮೂಲಿಮನಿ, ತುಳಸ ತಿಮ್ಮನ ಗೌಡ್ರ, ಜೈ ಬುನಬಿ ಸೋನೆ ಖಾನವರ, ಅಶೋಕ ಕರೂರ, ದೇವೇಂದ್ರ ಗೌಡ್ರು ಕರಿ ಗೌಡ್ರ ಗಾಯತ್ರಿ ಖಾನಾಪುರ, ಗಂಗವ್ವ ತಡಿಸಿ ಸೇರಿದಂತೆ ಗ್ರಾಮದ ಮುಖಂಡರು ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande