ಕೊಪ್ಪಳ : ನ. 19 ರಂದು ರಾಜ್ಯ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ
ಕೊಪ್ಪಳ, 17 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿ., ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕೆ ಮಾರಾಟ ಮಹಾಮಂಡಳ ನಿ., ಬೆಂಗಳೂರು, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್
ಕೊಪ್ಪಳ : ನ. 19 ರಂದು ರಾಜ್ಯ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ


ಕೊಪ್ಪಳ, 17 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿ., ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕೆ ಮಾರಾಟ ಮಹಾಮಂಡಳ ನಿ., ಬೆಂಗಳೂರು, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.. ಬಳ್ಳಾರಿ, ಆರ್.ಕೆ.ಡಿ.ಸಿ.ಸಿ. ಬ್ಯಾಂಕ್ ಬಿ., ರಾಯಚೂರು, ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿ..ರಾಯಚೂರು, ಚಿತ್ರದುರ್ಗ ಹುಬ್ಬಳ್ಳಿ ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಕೊಪ್ಪಳ, ಜಿಲ್ಲೆಯ ಅರ್ಬನ್ ಬ್ಯಾಂಕ್ ಗಳು, ಏಕಾರ್ಡ ಬ್ಯಾಂಕ್‌ಗಳು, ತಾಲ್ಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಗಳು, ಪತ್ತಿನ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳು, ಸಂಸ್ಥೆಗಳು, ಸೌಹಾರ್ದ ಸಹಕಾರಿ ಸಂಘಗಳು ಹಾಗೂ ಸಹಕಾರ ಇಲಾಖೆ ಇವರುಗಳ ಸಹಯೋಗದಲ್ಲಿ ರಾಜ್ಯ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025ರ ಕಾರ್ಯಕ್ರಮವನ್ನು ನವೆಂಬರ್ 19ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025ವನ್ನು ಆತ್ಯನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ಧೈಯ ವಾಕ್ಯದೊಂದಿಗೆ ಆಯೋಜಿಸಲಾಗಿದ್ದು, ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಪ್ರವಾಸೋಧ್ಯಮ, ಆರೋಗ್ಯ, ಹಸಿರು ಇಂದನ, ಪ್ಲಾಟ್ಫಾರಂ ಸಹಕಾರಿ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ ಎಂಬ ವಿಷಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರಾದ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ ಅವರು ಸಹಕಾರ ಧ್ವಜಾರೋಹಣ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಸಹಕಾರ ಪಿತಾಮಹ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋಧ್ಯಮ ಇಲಾಖೆ ಸಚಿವರಾದ ಹೆಚ್.ಕೆ ಪಾಟೀಲ ಅವರು ವಸ್ತು ಪ್ರದರ್ಶನ ಮಳಿಗೆಗಳ ಉದ್ಘಾಟನೆ ನೆರವೇರಿಸುವರು.

ಕರ್ನಾಟಕ ವಿಧಾನಸಭೆಯ ವಿರೋಧಪಕ್ಷದ ನಾಯಕರಾದ ಆರ್. ಅಶೋಕ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ಅವರು ಘನ ಉಪಸ್ಥಿತಿ ವಹಿಸುವರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭೆ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಮತ್ತು ಅಥಣಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಲಕ್ಷ್ಮಣ ಸವದಿ ಅವರು ಕೊಪ್ಪಳ ಜಿಲ್ಲೆಯ ಪ್ರಸಕ್ತ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸುವರು. ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ಕೊಪ್ಪಳ ವಿಧಾನಸಭೆ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆವಹಿಸುವರು. ಕೊಪ್ಪಳ ಸಂಸದರಾದ ರಾಜಶೇಖರ ಹಿಟ್ನಾಳ ಅವರು ಸಹಕಾರ ಪತ್ರಿಕೆ ವಿಶೇಷ ಸಂಚಿಕೆ ಬಿಡುಗಡೆಗೊಳಿಸುವರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರು ಹಾಗೂ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರ ಶಾಸಕರಾದ ಜಿ.ಟಿ. ದೇವೇಗೌಡ ಅವರು ಕೊಪ್ಪಳ ಜಿಲ್ಲೆಯ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸುವರು. ಮಾಜಿ ಸಹಕಾರ ಸಚಿವರು ಹಾಗೂಮಧುಗಿರಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಕೆ.ಎನ್. ರಾಜಣ್ಣ ಅವರು ಉತ್ತಮ ಸಹಕಾರ ಸಂಘಗಳಿಗೆ ಸನ್ಮಾನಿಸುವರು.

ಮುಖ್ಯ ಅತಿಥಿಗಳಾಗಿ ಗಂಗಾವತಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಜಿ.ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ ತುಂಗಭದ್ರ ಯೋಜನೆ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್ ಸಾಬ್ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ ಗುಪ್ತಾ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಕರ್ನಾಟಕ ರಾಜ್ಯ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳದ ಅಧ್ಯಕ್ಷರಾದ ವೆಂಕಟರಾವ್ ನಾಡಗೌಡ, ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿ., ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಶಕುಂತಲಾ ಬೆಲ್ದಾಳೆ ಮತ್ತು ವಿವಿಧ ಸಹಕಾರ ಮಹಾಮಂಡಳಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಸರ್ವ ಪದಾಧಿಕಾರಿಗಳು, ಕೊಪ್ಪಳ ಜಿಲ್ಲೆಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande