ಪುರುಷರ ಹಗ್ಗ ಜಗ್ಗಾಟದಲ್ಲಿ ಬಿಎಲ್‌ಡಿಇ ಪ್ರಥಮ ಸ್ಥಾನ
ವಿಜಯಪುರ, 18 ನವೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯರ್ವೇದ ಮಹಾವಿದ್ಯಾಲಯದ ಪುರುಷರ ಹಗ್ಗ ಜಗ್ಗಾಟ ತಂಡವು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜು ಮ
ಪ್ರಥಮ


ವಿಜಯಪುರ, 18 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯರ್ವೇದ ಮಹಾವಿದ್ಯಾಲಯದ ಪುರುಷರ ಹಗ್ಗ ಜಗ್ಗಾಟ ತಂಡವು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಇಳಕಲ ನಗರದ ಎಸ್. ವಿ. ಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಈರಪ್ಪ ಇಕ್ಕಳಕಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಉಪಪ್ರಾಚಾರ್ಯ ಡಾ. ಶಶಿಧರ ನಾಯಕ, ಶೈಕ್ಷಣಿಕ ಸಂಯೋಜಕ ಡಾ. ಕೆ. ಎ. ಪಾಟೀಲ, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ ಶುಭ ಕೋರಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande