

ಬಳ್ಳಾರಿ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಸಹಕಾರಿ ಕ್ಷೇತ್ರದಲ್ಲಿ ಸುದೀರ್ಘಕಾಲ ಸಲ್ಲಿಸಿರುವ ನಿರಂತರ ಸೇವೆಯನ್ನು ಪರಿಗಣಿಸಿ ಬಳ್ಳಾರಿಯ ಜನತಾ ಬಜಾರ್‍ನ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು ಆಗಿರುವ ಜಿ. ನೀಲಕಂಠಪ್ಪ ಅವರಿಗೆ `ಬಳ್ಳಾರಿ ಜಿಲ್ಲಾ ಶ್ರೇಷ್ಠ ಸಹಕಾರಿ ರತ್ನ' ಪ್ರಶಸ್ತಿಯನ್ನು ಹೊಸಪೇಟೆಯಲ್ಲಿ ನಡೆದ ಅಖಿಲ ಭಾರತ ಸಹಕಾರಿ ಸಪ್ತಾಹದ 72ನೇ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.
ಬಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನಸ್ವಾಮಿ ಹಾಗೂ ಸಹಕಾರಿ ಇಲಾಖೆಯ ಅಧಿಕಾರಿಗಳು - ವಿವಿಧ ಸಹಕಾರಿ ಸಂಘಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್