ಮೇಕೆದಾಟು ಯೋಜನೆಗೆ ರಾಜಕೀಯ ಪ್ರತಿಷ್ಠೆ ಬೇಡ : ಬೊಮ್ಮಾಯಿ‌
ಕೇಂದ್ರದಿಂದ ಸೌಹಾರ್ದತೆಯಿಂದ ಅನುಮತಿ ಪಡೆದರೆ ಕಾನೂನು ಹೋರಾಟದಲ್ಲಿ ಅನುಕೂಲ: ಬಸವರಾಜ ಬೊಮ್ಮಾಯಿ
BSB


ಬೆಂಗಳೂರು, 18 ನವೆಂಬರ್ (ಹಿ.ಸ.) :

ಆ್ಯಂಕರ್ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ವಿಶ್ವಾಸದಲ್ಲಿ ಸೌಹಾರ್ದತೆಯಲ್ಲಿ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ. ಇದರಲ್ಲಿ ರಾಜಕೀಯ ಬೆರೆಸಿದರೆ, ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ‌.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಇದು ಬಹಳ ವರ್ಷದ ರಾಜ್ಯದ ಜನರ ಕನಸಾಗಿದೆ. ಇದು 1996ರಿಂದ ಆರಂಭವಾಗಿದ್ದು. ಪವರ್ ಪ್ರಾಜೆಕ್ಟ್ ನಿಂದ ಆರಂಭವಾಗಿದ್ದು. ನಾನು ನೀರಾವರಿ ಸಚಿವ ಆಗಿದ್ದಾಗ ಬಹಳಷ್ಟು ಪ್ರದೇಶ ಮುಳುಗಡೆ ಆಗುತ್ತದೆ ಅಂತ ಕೇಳಿಬಂದಿತ್ತು. ಅದನ್ನು ಬದಲಾವಣೆ ಮಾಡಿ ಡಿಪಿಆರ್ ಸಿದ್ದ ಪಡೆಸಿದ್ದೇವು. ಕಾಂಗ್ರೆಸ್ ನವರು ಪಾದಯಾತ್ರೆ ಮಾಡದಿದ್ದರೆ ಇಷ್ಟೋತ್ತಿಗೆ ಯೋಜನೆ ಒಂದು ಹಂತಕ್ಕೆ ಬರುತ್ತಿತ್ತು. ಇವರು ಪಾದಯಾತ್ರೆ ಮಾಡಿದ್ದರಿಂದ ತಮಿಳುನಾಡಿನವರು ಮಿಸ್ ಲೀನಿಯಸ್ ಕೇಸ್ ಹಾಕಿದ್ದಾರೆ. ತಮಿಳುನಾಡು ಕೇಸು ನಿಲ್ಲುವುದಿಲ್ಲ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಾವು ಬಹಳ ಬುದ್ದಿವಂತಿಕೆಯಿಂದ ಎಲ್ಲ ಹಂತಗಳನ್ನು ಮುಗಿಸಿಕೊಳ್ಳಬೇಕು. ಯಾಕೆಂದರೆ ಈಗ ನಡೆಯುವ ಬೆಳವಣಿಗೆಯಲ್ಲಿ ಏನಾದರೂ ವ್ಯತ್ಯಾಸವಾದರೆ ತಮಿಳುನಾಡಿನವರು ಮತ್ತೆ ಕೋರ್ಟ್ ಗೆ ಹೋಗುತ್ತಾರೆ‌. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಇದನ್ನು ಸಿಡಬ್ಲ್ಯುಸಿಯಲ್ಲಿ ಒಪ್ಪಿಗೆ ನೀಡಬೇಕಾದರೆ ಸಿಡಬ್ಲ್ಯುಎಂಎ ದಲ್ಲಿ ಒಪ್ಪಿಗೆ ನೀಡಬೇಕಾಗುತ್ತದೆ. ಅನುಮತಿ ನೀಡುವಾಗ ಎಲ್ಲಿ ಸ್ಥಗಿತಗೊಂಡಿತ್ತು, ಅಲ್ಲಿಂದಲೇ ಪ್ರಾರಂಭ ಮಾಡಬೇಕು ಎಂದು ಮನವಿ ಮಾಡುತ್ತೇನೆ ಎಂದರು.

ರಾಜ್ಯ ಸರ್ಕಾರ ಕೇಂದ್ರ ಸರಕಾರದ ಜೊತೆಗೆ ವಿಶ್ವಾಸದಲ್ಲಿ ಸೌಹಾರ್ದತೆಯಲ್ಲಿ ಈ ಮಹತ್ವದ ಯೋಜನೆಗೆ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ. ಇದರಲ್ಲಿ ರಾಜಕೀಯ ಬೆರೆಸಿದರೆ, ರಾಜಕೀಯ ಪ್ರತಿಷ್ಟೇ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದು ಬೊಮ್ಮಾಯಿ‌ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande