
ಸುಕ್ಮಾ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಛತ್ತೀಸ್‌ಗಢದ ನಕ್ಸಲ್‌ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆಯಿಂದ ನಡೆದಿರುವ ಭಾರಿ ಎನ್‌ಕೌಂಟರ್‌ನಲ್ಲಿ 1 ಕೋಟಿ ರೂ. ಬಹುಮಾನ ಘೋಷಿಸಲ್ಪಟ್ಟಿದ್ದ ನಕ್ಸಲ್ ಕಮಾಂಡರ್ ಮದ್ವಿ ಹಿಡ್ಮಾ ಮತ್ತು ಆತನ ಪತ್ನಿ ಸೇರಿ ಆರು ನಕ್ಸಲರು ಹತ್ಯೆಯಾಗಿದ್ದಾರೆ. ಮತ್ತೊಂದು ಎನ್‌ಕೌಂಟರ್ ಎರ್ರಾಬೋರ್ ಪ್ರದೇಶದ ಕಾಡಿನಲ್ಲಿ ಮುಂದುವರಿದಿದ್ದು, ಹಲವಾರು ಉಗ್ರರು ಗಾಯಗೊಂಡಿರುವ ಸಾಧ್ಯತೆ ಇದೆ.
ಮೊದಲ ಎನ್‌ಕೌಂಟರ್ ಛತ್ತೀಸ್‌ಗಢ–ಆಂಧ್ರ ಗಡಿಯಲ್ಲಿ ನಡೆದಿದೆ. ಡಿಆರ್‌ಜಿ, ಎಸ್‌ಟಿಎಫ್ ಮತ್ತು ಕೋಬ್ರಾ ದಳಗಳು ಸಂಯುಕ್ತವಾಗಿ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ನಕ್ಸಲರು ಗುಂಡು ಹಾರಿಸಿದ್ದು, ಭದ್ರತಾ ಪಡೆಗಳು ಪ್ರತಿಯಾಗಿ ಗುಂಡು ಹಾರಿಸಿದವು. ಘಟನಾ ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎನ್‌ಕೌಂಟರ್ ಕುರಿತು ಮಹತ್ವದ ಮಾಹಿತಿ ಲಭ್ಯವಾಗಿದೆ. ಅಧಿಕೃತ ಘೋಷಣೆ ಶೀಘ್ರ,” ಎಂದು ಬಸ್ತಾರ್ ಐಜಿ ಸುಂದರರಾಜ್ ಪಿ. ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa