ನಾಳೆ ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಭಾರತ ಪ್ರವಾಸ
ನವದೆಹಲಿ, 18 ನವೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 19ರಂದು ಆಂಧ್ರ ಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ಪುಟ್ಟಪರ್ತಿಯಲ್ಲಿ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಮಹಾಸಮಾಧಿಯಲ್ಲಿ ಗೌರವ ಸಲ್ಲಿಸಿದ ಬಳಿಕ, ಅವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ
Pm tour


ನವದೆಹಲಿ, 18 ನವೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 19ರಂದು ಆಂಧ್ರ ಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ಪುಟ್ಟಪರ್ತಿಯಲ್ಲಿ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಮಹಾಸಮಾಧಿಯಲ್ಲಿ ಗೌರವ ಸಲ್ಲಿಸಿದ ಬಳಿಕ, ಅವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸ್ಮರಣಾರ್ಥ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ.

ನಂತರ ಮಧ್ಯಾಹ್ನ ತಮಿಳುನಾಡಿನ ಕೊಯಮತ್ತೂರಿನಲ್ಲಿ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಅಲ್ಲಿಯೇ ಪಿಎಂ-ಕಿಸಾನ್ ಯೋಜನೆಯ ₹18,000 ಕೋಟಿಗೂ ಅಧಿಕ ಮೊತ್ತದ 21ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಸಮ್ಮೇಳನದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದ 50,000ಕ್ಕೂ ಹೆಚ್ಚು ರೈತರು ಹಾಗೂ ತಜ್ಞರು ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande