
ರಾಯಚೂರು, 18 ನವೆಂಬರ್ (ಹಿ.ಸ.) :
ಆ್ಯಂಕರ್ : ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ, ವಿವೋಚನ ನಿಧಿಯ ಸಾಮಾನ್ಯ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ವಿವಿಧ ಬಗೆಯ ತರಕಾರಿ ಬೀಜ ವಿತರಿಸಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಪ್ರದೇಶ ವಿಸ್ತರಣೆ ಲಭ್ಯತೆಗೆ ಅನುಗುಣವಾಗಿ ಗರಿಷ್ಟ ರೂ.20000 ಮೊತ್ತದ ವಿವಿಧ ಬಗೆಯ ತರಕಾರಿ ಬೀಜದ ಕೀಟಗಳನ್ನು ತೋಟಗಾರಿಕೆ ಇಲಾಖೆಯಿಂದ ವಿತರಿಸಲಾಗುತ್ತಿದ್ದು, ಆಸಕ್ತಿಯುಳ್ಳ ರೈತರು ತಮ್ಮ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ಹಾಗೂ ತಾಲೂಕಿನ ಕಚೇರಿಗಳ ಹೋಬಳಿ ಮಟ್ಟದ ರೈತಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್