
ಬಳ್ಳಾರಿ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೇಂದ್ರ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದಡಿಯ ಮೇರಾ ಯುವ ಭಾರತ್ ಕೇಂದ್ರ, ಮಹಾನಗರ ಪಾಲಿಕೆ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ರಾಷ್ಟಿಯ ಯೋಜನಾ ಘಟಕ, ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಂಯುಕ್ತಾಶ್ರಯದಲ್ಲಿ ಉಕ್ಕಿನ ಮನುಷ್ಯ ಮತ್ತು ರಾಷ್ಟಿಯ ಏಕತೆಯ ಪ್ರತಿಪಾದಕ ಸರ್ದಾರ್ ವಲ್ಲಭಭಾಯ್ ಅವರ 150 ನೇ ಜನ್ಮ ದಿನಾಚರಣೆ ಅಂಗವಾಗಿ ನಾಳೆ ಬೆಳಿಗ್ಗೆ 09 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿಪೂರ್ವ ಕಾಲೇಜು ಮೈದಾನದಲ್ಲಿ ಸರ್ದಾರ್@150 ಏಕತಾ ಮಾರ್ಚ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಮಾರ್ಗ: ಸರ್ಕಾರಿ (ಮಾ.ಪು) ಪದವಿಪೂರ್ವ ಕಾಲೇಜು ಮೈದಾನದಿಂದ ಪಾದಯಾತ್ರೆಯು ಗಡಿಗಿ ಚೆನ್ನಪ್ಪ ವೃತ್ತ- ಬೆಂಗಳೂರು ರಸ್ತೆ- ಹಳೆಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಮುಂಭಾಗ- ಹೆಚ್.ಆರ್.ಗವಿಯಪ್ಪ ವೃತ್ತ- ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದ ವರೆಗೆ ನಡೆಯಲಿದೆ.
ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಬಹುದು ಎಂದು ಮೇರಾ ಯುವ ಭಾರತ್ ಕೇಂದ್ರದ ಜಿಲ್ಲಾ ಯುವ ಅಧಿಕಾರಿಯವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್