

ಕೊಪ್ಪಳ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಡಿಸೆಂಬರ್ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತನ ಸದುಪಯೋಗವನ್ನು ಕೊಪ್ಪಳ ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳದ ಮಹಾಂತೇಶ ಎಸ್. ದರಗದ ಹೇಳಿದರು.
ಅವರು ಮಂಗಳವಾರ ಡಿಸೆಂಬರ್ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತನ ಕುರಿತು ಮಾಹಿತಿ ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಛೇರಿ ಕೊಪ್ಪಳದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಷ್ಟ್ರೀಯ ಲೋಕ ಅದಾಲತನಲ್ಲಿ ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನದ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ರಾಜಿ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂ- ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಚೆಕ್ ಬೌನ್ಸ ಪ್ರಕರಣಗಳು. ಮೋಟಾರು ಅಪಘಾತ ಪರಿಹಾರ ಪ್ರಕರಣಗಳ ಮತ್ತು ವೈವಾಹಿಕ ಪ್ರಕರಣಗಳಾಗಿವೆ ಎಂದರು.
ರಾಜಿ ಆಗಲು ಅರ್ಹವಿರುವ ಕ್ರಿಮಿನಲ್ ಕಾಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಇತರೆ ಹಲವಾರು ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ರಾಜಿ ಸಂಧಾನದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ, ಪ್ರಕರಣವು ಇಬ್ಬರಿಗೂ ಒಪ್ಪಿಗೆಯಾಗುವಂತೆ ಕೊನೆಗೊಂಡು ನ್ಯಾಯಾಲಯಕ್ಕೆ ತುಂಬಿದ ನ್ಯಾಯಾಲಯದ ಶುಲ್ಕ ಸಂಪೂರ್ಣವಾಗಿ ವಾಪಸ್ ನೀಡಲಾಗುವುದು. ಕಾರಣ ಪಕ್ಷಗಾರರು, ಇದೇ ಡಿಸೆಂಬರ್ 13, 2025 ರಂದು ಕೊಪ್ಪಳ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತನ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಕುರಿತು ಜಿಲ್ಲೆಯ ಜನರಿಗೆ ಮಾಹಿತಿ ತಲುಪಲು ಮಾಧ್ಯಮದವರು ಹೆಚ್ಚಿನ ಪ್ರಚಾರ ನೀಡಬೇಕು. ಜಿಲ್ಲೆಯಲ್ಲಿ 32 ಸಾವಿರಕ್ಕಿಂತ ಹೆಚ್ಚಿನ ಪ್ರಕರಣಗಳಿದ್ದು, ಕಳೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ 6 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಈ ಸಲ 7 ಸಾವಿರ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸುವ ಗುರಿ ಇದೆ. ನ್ಯಾಯಾಧೀಶರು, ವಕೀಲರು ಹಾಗೂ ಪಕ್ಷಗಾರರ ಸಹಕಾರವು ನಮಗೆ ಬೇಕಿದೆ ಎಂದು ಹೇಳಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿಗಳಾದ ಸಂತೋಷ ಜೋಶಿ, ಇಸ್ಮಾಯಿಲ್, ಬಸವರಾಜ, ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕರಾದ ಸುರೇಶ ಜಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್