ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ
ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ
ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ


ಕೋಲಾರ, ೧೮ ನವೆಂಬರ್ (ಹಿ.ಸ) :

ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ನವೆಂಬರ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗುವುದು.

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಇದಕ್ಕಾಗಿ ಕೋಲಾರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ೧೮ವರ್ಷ ಮೇಲ್ಪಟ್ಟ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಅರ್ಜಿಗಳನ್ನು ನವೆಂಬರ್ ೨೨ ರೊಳಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಛೇರಿಯ ಕಛೇರಿ ಸಮಯದಲ್ಲಿ ಪಡೆಯಬಹುದು ಅಥವಾ ದೂರವಾಣಿ ಮುಖಾಂತರ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ. ೮೬೧೮೯೭೯೯೬೪ ಯನ್ನು ಸಂಪರ್ಕಿಸಬಹುದೆ0ದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande