
ಹುಬ್ಬಳ್ಳಿ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಮಂಗಳವಾರದ ರಾಶಿ ಫಲ
*ಮೇಷ ರಾಶಿ :*
ಭಾವನಾತ್ಮಕವಾಗಿ ಸಂವೇದನಾಶೀಲರಾಗುವಿರಿ. ಆದರೂ ಅದು ನಿಮ್ಮ ಒಳ ಜ್ಞಾನವನ್ನು ಹೆಚ್ಚಿಸುತ್ತದೆ. ಕಲಾತ್ಮಕ ಕೆಲಸಗಳಿಗೆ ಒಳ್ಳೆಯ ದಿನ. ಸ್ಥಿರಾಸ್ತಿಯನ್ನು ಖರೀದಿಸುವ ಸಂದರ್ಭದಲ್ಲಿ ನಾನಾ ತೊಂದರೆಗಳು ಬರಬಹುದು. ಮಕ್ಕಳ ಆಗಮನದಿಂದ ಮನೆಯಲ್ಲಿ ಸಂತೋಷವು ನೆಲೆಸುವುದು. ಆಸ್ತಿಯನ್ನು ಖರೀದಿಸುವ ಕುರಿತು ಚರ್ಚೋಪಚರ್ಚೆಗಳನ್ನು ಮಾಡುವಿರಿ. ಆರ್ಥಿಕ ಒತ್ತಡದಿಂದ ನೀವು ಹೊರಬರಲು ದಾರಿಯನ್ನು ಹುಡುಕುವಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು. ಹೇಳಲಾಗದ ಮರೆಯಲಾಗದ ಸ್ಥಿತಿ ಇರಲಿದೆ. ಹಣದ ವ್ಯಾಪಾರದಲ್ಲಿ ಜಾಗ್ರತೆ. ಹಿರಿಯರ ಮಾತು ಕೇಳಿದರೆ ಲಾಭ. ಸಂಜೆ ಹೊತ್ತಿಗೆ ಮನಶ್ಶಾಂತಿ. ಇದು ನಿಮ್ಮವರಿಗೆ ಮುಜುಗರದ ಸಂದರ್ಭವಾಗುವುದು. ಉದ್ಯೋಗದಲ್ಲಿ ಆಲಸ್ಯದಿಂದ ಇರುವ ಕಾರಣ ಅಧಿಕಾರಿಗಳಿಂದ ಸೂಚನೆ ಬರಬಹುದು. ವ್ಯಾಪಾರದ ನಷ್ಟವನ್ನು ಬೇರೆ ರೀತಿಯಿಂದ ಸರಿಮಾಡಿಕೊಳ್ಳುವಿರಿ. ಯಾರ ಜೊತೆಯೂ ನಿರ್ದಯೆಯ ವ್ಯವಹಾರ ಬೇಡ.
*ವೃಷಭ ರಾಶಿ :*
ಮಿತ್ರರು ಹಾಗೂ ಸಹೋದ್ಯೋಗಿಗಳಿಂದ ಸಹಕಾರ ಸಿಗುತ್ತದೆ. ಹೊಸ ಅವಕಾಶ ಅಥವಾ ಹೊಸ ಯೋಜನೆ ಶುರು ಮಾಡುವ ಸೂಚನೆ. ನಿಮಗೆ ಪ್ರಾಪ್ತವಾದ ಸ್ಥಾನದಿಂದ ನಿಮ್ಮ ಆಲೋಚನಾ ಕ್ರಮಗಳೂ ವ್ಯತ್ಯಾಸವಾಗುವುದು. ಸಂಗಾತಿಯ ಮಾತಿನಂತೆ ನಡೆದುಕೊಳ್ಳುವಿರಿ. ಮನೆಯಲ್ಲಿ ಹಿಂದಿನ ಘಟನೆಯೇ ಮರುಕಳಿಸಲಿದ್ದು ಸಣ್ಣ ವಾಗ್ವಾದವೂ ನಡೆಯಬಹುದು. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ಸಂಶೋಧನೆ ಕ್ಷೇತ್ರದವರಿಗೆ ಉತ್ತಮ ದಿನ. ಮನಸ್ಸು ಕ್ರಿಯಾಶೀಲಚಾಗುವುದು. ಕುಟುಂಬದಲ್ಲಿ ಸಾಮಾನ್ಯ ದಿನ. ಇಂದು ಬಂಧುಗಳನ್ನು ಮನೆಗೆ ಆಹ್ವಾನಿಸುವಿರಿ. ಮನಸ್ಸಿನ ನೋವನ್ನು ಮರೆಯಲು ಒಂಟಿಯಾಗಿ ದೂರ ಹೋಗುವಿರಿ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ಯಾರದೋ ಮಾತನ್ನು ಕೇಳಿ ನಿಮ್ಮವರ ಬಗ್ಗೆ ತೀರ್ಮಾನ ಮಾಡಬೇಡಿ. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು.
*ಮಿಥುನ ರಾಶಿ :*
ಆಲೋಚನೆ, ಯೋಜನೆ, ನಿರ್ಧಾರಗಳೆಲ್ಲವೂ ನಿಮ್ಮದೇ ಆಗಲಿದ್ದು ಇದಕ್ಕೆ ನೀವು ಸ್ವತಂತ್ರರು. ನಿಮ್ಮ ಶಿಸ್ತಿನ ಗುಣ ದೊಡ್ಡ ನೆರವು ನೀಡಲಿದೆ. ಕಾರ್ಯದ ಸ್ಥಳದಲ್ಲಿ ನಿಮಗೆ ಕಹಿಯಾದ ಅನುಭವವಾಗಲಿದೆ. ಹಿತಶತ್ರುಗಳು ಸಕಾಲಕ್ಕೆ ಕಾರ್ಯದಲ್ಲಿ ತೊಂದರೆಯನ್ನು ಕೊಡುವರು. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು. ಒತ್ತಡದ ನಿವಾರಣಡಗೆ ಸಭೆ-ಸಮಾರಂಭಗಳಿಗೆ ತೆರಳುವಿರಿ. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಅತಿಯಾದ ಕೋಪದಿಂದ ಎಲ್ಲ ಕೆಲಸವನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ಕೆಲಸದಲ್ಲಿ ದೊಡ್ಡದಾಗಿ ಏನೂ ಬದಲಾಗದಿದ್ದರೂ ಸ್ಥಿರತೆ ಸುಧಾರಣೆ. ಮನೆಗೆ ಸಂಬಂಧಿಸಿದ ಒಂದು ವಿಚಾರ ನಿಮಗೆ ಸಂತೋಷ ಕೊಡಬಹುದು. ಅಧಿಕಾರಿಯ ವಿಶ್ವಾಸವನ್ನು ಪಡೆದು ಹೆಚ್ಚಿನ ಸ್ಥಾನ ಪಡೆಯುವಿರಿ. ಅನಿರೀಕ್ಷಿತ ರಾಜಕಾರಿಣಿಗಳ ಭೇಟಿಯಿಂದ ಕೆಲವು ಬದಲಾವಣೆಯನ್ನು ಕಾಣುವಿರಿ. ಇಂದು ದೂರ ಪ್ರವಾಸದಿಂದ ನಿಮಗೆ ತೊಂದರೆಯಾಗಲಿದೆ.
*ಕರ್ಕಾಟಕ ರಾಶಿ :*
ಸಾಹಸ, ಪ್ರಯಾಣ ಮತ್ತು ಕಲಿಕೆಗೆ ಉತ್ತಮ ದಿನ. ಹೊಸ ವಿಚಾರಗಳನ್ನು ಅಳವಡಿಸಿಕೊಳ್ಳಲು ಮನಸ್ಸು ತೆರೆದುಕೊಳ್ಳುತ್ತದೆ. ನಿಮ್ಮ ಸ್ನೇಹಪರವಾದ ವ್ಯಕ್ತಿತ್ವವು ಎಲ್ಲರಿಗೂ ಇಷ್ಟವಾಗುತ್ತದೆ ಎನ್ನಲಾಗದು. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯನ್ನು ಅನುಭವಿಸುವಿರಿ. ಅಧಿಕಾರದಿಂದ ಕೆಲವು ತೊಂದರೆಯನ್ನು ಎದುರಿಸಬೇಕಾದೀತು. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ನಿಮ್ಮ ಕೆಲಸಕ್ಕೆ ಗುರುಗಳಿಂದ ಶ್ಲಾಘನೆ. ದೂರದ ಸಂಬಂಧಿಕರಿಂದ ಸುದ್ದಿ. ಧನ ಪ್ರವಾಹ ಸರಿಯಾಗಿದ್ದರೂ ಅನವಶ್ಯಕ ವೆಚ್ಚ ತಪ್ಪಿಸಿ. ದಾಂಪತ್ಯದಲ್ಲಿ ಹೊಂದಾಣಿಕೆ ಅವಶ್ಯಕತೆ ಅಧಿಕವಾಗಿ ಇರಲಿದೆ. ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತನ್ನು ಕಳೆದುಕೊಳ್ಳುವಿರಿ. ನಿಮಗೆ ಇಂದು ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ. ವಿದ್ಯಾಭ್ಯಾಸವನ್ನು ಯೋಗ್ಯರೀತಿಯಲ್ಲಿ ನಡೆಸಲು ಕಷ್ಟವಾದೀತು. ತಾಯಿಯ ಆಸೆಯನ್ನು ಸ್ವಲ್ಪವಾದರೂ ತೀರಿಸುವಿರಿ.
*ಸಿಂಹ ರಾಶಿ :*
ಕೆಲಸದಲ್ಲಿ ವೇಗ, ಮನಸ್ಸಿನಲ್ಲಿ ಸ್ಪಷ್ಟತೆ. ಹಳೆಯ ಒತ್ತಡಗಳು ದೂರವಾಗುತ್ತವೆ. ಇಂದು ವಾಹನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅನಿರೀಕ್ಷಿತ ಪ್ರಯಾಣವು ಆಯಾಸವನ್ನು ಕೊಡಬಹುದು. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪರಾಜಯ ಆಗಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ. ಸಾಲಗಾರರಿಗೆ ಅತಿಯಾದ ಕಿರಿಕಿರಿಯು ಮೇಲಿಂದ ಮೇಲೆ ಬರಲಿದೆ. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ವಿದೇಶದಿಂದ ಆಹ್ವಾನವು ಬರಬಹುದು. ಆತುರದ ಪ್ರಯಾಣವನ್ನು ಇಂದು ಮಾಡಬೇಡಿ. ಹಣದ ಹೂಡಿಕೆ ವಿಚಾರಗಳಲ್ಲಿ ಲಾಭದ ಸೂಚನೆ. ಸ್ವಲ್ಪ ಕೋಪ ನಿಯಂತ್ರಿಸಬೇಕು. ಆದಾಯದ ಬಗ್ಗೆ ಗಮನಹರಿಸಿ ಆರೋಗ್ಯವನ್ನು ನಿರ್ಲಕ್ಷ್ಯದಿಂದ ನೋಡುವಿರಿ. ನಿಮ್ಮ ಪ್ರತಿಕ್ರಿಯೆ ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನೇ ಅರಿತು ಕಾರ್ಯವನ್ನು ಮಾಡುವಿರಿ.
*ಕನ್ಯಾ ರಾಶಿ :*
ಸಮನ್ವಯ ಮತ್ತು ತಾಳ್ಮೆಯೇ ನಿಮ್ಮ ಬದುಕಿನ ಕೀಲಿ. ಹೊಸ ಪರಿಚಯಗಳಿಂದ ಅನುಕೂಲ ದೊರೆಯಬಹುದು. ಹಣದ ಆಸೆಗೆ ಅನ್ಯ ಮಾರ್ಗವನ್ನು ಹಿಡಿಯುವ ಸಾಧ್ಯತೆ ಇದೆ. ಇಂದು ಯಾರ ಬಳಿಯೂ ಸಹಾಯವನ್ನು ಕೇಳುವ ಮನಸ್ಸು ಇರದು. ಆಸ್ತಿಯ ವಿಚಾರವಾಗಿ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧರಾಗುವಿರಿ. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ. ಪರಸ್ಪರ ಸಾಮರಸ್ಯಕ್ಕಾಗಿ ದಂಪತಿಗಳು ದಾರಿಯನ್ನು ಹುಡುಕುವರು. ಕಳೆದು ಹೋದ ಪ್ರೇಮ ವಿಚಾರವು ಮತ್ತೆ ಕಾರಣಾಂತರಗಳಿಂದ ನೆನಪಾಗುವುದು. ಕಾನೂನು, ಆಡಳಿತ, ನಿರ್ವಹಣಾ ಕ್ಷೇತ್ರದವರಿಗೆ ಉತ್ತಮ ಫಲಿತಾಂಶ. ಮನಸ್ಸಿನಲ್ಲಿ ತೂಕ ಕಮ್ಮಿಯಾಗುತ್ತದೆ. ದಂಪತಿಗಳ ನಡುವೆ ಸಿಹಿ, ಕಹಿ ಮಾತುಕತೆ ನಡೆಯಲಿದೆ. ನಿಮ್ಮ ಬಗ್ಗೆ ಬೇರೆಯವರಿಗೆ ಔದಾರ್ಯಭಾವವು ಇರಲಿದೆ. ಹಿರಿಯರ ಭಾವನೆಯನ್ನು ನೀವು ಪೂರ್ಣ ಮಾಡುವಿರಿ. ನಿಮ್ಮ ಅಸಾಮಾನ್ಯ ಚಿಂತನೆಯು ನಿಮ್ಮನ್ನು ದೊಡ್ಡವರನ್ನಾಗಿ ಮಾಡಿದ್ದು. ಹೊಸ ಉದ್ಯೋಗದ ಬಗ್ಗೆ ಆಪ್ತರ ಜೊತೆ ಮಂಥನ ನಡೆಸುವಿರಿ.
*ತುಲಾ ರಾಶಿ :*
ನಿಮ್ಮ ಯೋಜನೆಗಳನ್ನು ಮರುಪರಿಶೀಲಿಸಲು ಉತ್ತಮ ದಿನ. ಧನ ಖರ್ಚು ಬಗ್ಗೆ ಎಚ್ಚರಿಕೆ ಬೇಕು. ಕೆಲಸದಲ್ಲಿ ಗಮನ ಸಾಕಷ್ಟು ಇರಲಿ. ಇಂದು ಭೂಮಿಯ ಖರೀದಿಯ ಬಗ್ಗೆ ಚಿಂತನೆ ಇದ್ದರೆ ಮುಂದುವರಿಯಬಹುದು. ಸಹೋದರನ ಮಾತಗಳನ್ನು ನೀವು ಜೀರ್ಣಮಾಡಿಕೊಳ್ಳುವುದು ಕಷ್ಟವಾಗಿ ಸಿಟ್ಟಾಗುವಿರಿ. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ಚಿಕ್ಕ ತಪ್ಪು ದೊಡ್ಡದಾಗಿ ಕಾಣಬಹುದು. ಕುಟುಂಬದಲ್ಲಿ ಬೆಂಬಲ ಚೆನ್ನಾಗಿರುತ್ತದೆ. ಆರೋಗ್ಯದಲ್ಲಿ ಸ್ವಲ್ಪ ದೌರ್ಬಲ್ಯ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಸಂಗಾತಿಯು ನಿಮ್ಮ ಜೊತೆ ಜಗಳವಾಡಿ ಹಳೆಯ ವಿಚಾರವನ್ನು ಪುನಃ ಪ್ರಸ್ತಾಪಿಸಬಹುದು. ಸ್ತ್ರೀಸಂಬಂಧವಾದ ಆರೋಪವು ಬರಲಿದೆ. ಹೊಸದಾಗಿ ಸಾರ್ವಜನಿಕ ಕೆಲಸದಲ್ಲಿ ಕಾರ್ಯ ಮಾಡುವವರಿಗೆ ಮುಜುಗರವಿರಲಿದೆ. ಉದ್ಯೋಗದಲ್ಲಿ ಗಾಂಭೀರ್ಯವಿರಲಿದೆ. ಉನ್ನತ ವಿದ್ಯಾಭ್ಯಾಸಕ್ಕೆ ಸರಿಯಾದ ದಿಕ್ಕು ಕಾಣಿಸದು.
*ವೃಶ್ಚಿಕ ರಾಶಿ :*
ನಿಮ್ಮ ಆತ್ಮವಿಶ್ವಾಸ ತುಂಬಾ ಬಲವಾಗಿರುತ್ತದೆ. ನಾಯಕತ್ವ ಗುಣ ಮೆರೆದಾಡುವ ದಿನ. ಕೆಲಸದಲ್ಲಿ ಮಾತಿನ ತೂಕ ಹೆಚ್ಚಾಗುತ್ತದೆ. ನೀವು ಇಂದು ಅನೇಕ ದಿನಗಳಿಂದ ನಿಂತಿದ್ದ ಕೆಲಸಗಳನ್ನು ಪೂರ್ಣಗೊಳ್ಳಬಹುದು. ಉದ್ಯೋಗಕ್ಕೆ ಅನೇಕ ಮಾರ್ಗಗಳು ತೆರೆದುಕೊಳ್ಳಲಿವೆ. ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನು ಅರಿತು ಕಾರ್ಯವನ್ನು ಮಾಡುವಿರಿ. ಮನೋಭಿಲಾಶೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಒಂಟಿಯಾಗಿ ಸುತ್ತಾಡಬೇಕೆನಿಸುವುದು. ಇಂದು ನಿಮ್ಮ ಬಳಿ ಸಾಮಾಜಿಕ ಕಳಕಳಿಯಿರುವ ಜನರು ಬರುವರು. ಇನ್ನು ಬಾರದು ಎಂದುಕೊಂಡ ಹಣವು ಇಂದು ನಿಮ್ಮ ಕೈ ಸೇರುವುದು. ಸಾಮಾಜಿಕವಾಗಿ ಪ್ರಶಂಸೆ ಸಿಗುತ್ತದೆ. ಧೈರ್ಯದಿಂದ ಮಾಡಿದ ಕಾರ್ಯ ಫಲ ನೀಡುತ್ತದೆ ಆದರೆ ಅಹಂಕಾರ ದೂರವಿರಲಿ. ನಿಮ್ಮ ಮೇಲೆ ಬಂದ ಅಪವಾದವನ್ನು ನೀವು ಇನ್ನೊಬ್ಬರ ಮೇಲೆ ಹಾಕುವುದು ಬೇಡ. ಸತ್ಯಾಸತ್ಯತೆಯನ್ನು ಸಾಬೀತು ಮಾಡಿ. ಪ್ರಾಣಿಗಳ ಜೊತೆ ಒಡನಾಡಲಿದ್ದೀರಿ.
*ಧನು ರಾಶಿ :*
ಮನೆಯಲ್ಲಿ ನೆಮ್ಮದಿ, ಮನಸ್ಸಿನಲ್ಲಿ ಶಾಂತಿಯ ದಿನ. ಕುಟುಂಬ, ಭಾವನಾತ್ಮಕ ವಿಷಯಗಳಲ್ಲಿ ಸುಧಾರಣೆ. ಇಂದು ನಿಮಗೆ ಸಾಲ ಕೊಡಲಿಕ್ಕಾಗಿ ಒಂದರಮೇಲೆ ಒಂದರಂತೆ ಕರೆಗಳು ಬರಬಹುದು. ತಂದೆಯ ಕಾರ್ಯಕ್ಕೆ ನಿಮ್ಮ ಸಹಕಾರವು ಇರಲಿದೆ. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ಕಣ್ಣಿಗೆ ಪರಮಸ್ವಾರ್ಥಿ ಎನಿಸಿಕೊಳ್ಳುವಿರಿ. ಸರ್ಕಾರದ ಸೌಲಭ್ಯವನ್ನು ಪಡೆಯಲು ನೀವು ಓಡಾಟ ಮಾಡುವಿರಿ. ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ. ಆರ್ಥಿಕ ವಿಷಯಗಳಲ್ಲಿ ಸ್ಥಿರತೆ ಕಾಣಬಹುದು. ಕೆಲಸದಲ್ಲಿ ಹೊಸ ಅವಕಾಶ ಸೂಚನೆ ಸಿಗಲಿದೆ. ಆರೋಗ್ಯ ಕಡೆ ಸ್ವಲ್ಪ ಜಾಗರೂಕತೆ ಅಗತ್ಯ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡುವುದು ನಿಮಗೆ ಇಷ್ಟವಾಗದು. ಸ್ತ್ರೀಯರ ವಿಚಾರದಲ್ಲಿ ನಿಮಗೆ ಬುದ್ಧಿಯು ಸರಿಯಾಗಿ ಸೂಚಿಸದು.
*ಮಕರ ರಾಶಿ :*
ಸಂವಾದ, ಮಾತುಕತೆಯಿಂದ ಹೊಸ ಪರಿಚಯಗಳು ಹೆಚ್ಚಾಗುವ ದಿನ. ಕೆಲಸದಲ್ಲಿ ಉತ್ತಮ ಸಮನ್ವಯ ಸಿಗುತ್ತದೆ. ಕಿಂಚಿತ್ತಾದರೂ ನಿಮ್ಮಿಂದ ಸಹಕರಾವಾದರೆ ನಿಮಗೆ ಸಮಾಧಾನ ಸಿಗಲಿದೆ. ಹಿರಿಯರಿಗೆ ಅಗೌರವದ ಮಾತುಗಳನ್ನು ಆಡುವಿರಿ. ನಿಮ್ಮ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ಪ್ರಯಾಣದ ಯೋಗ ಇದೆ. ಕಿರು ಪ್ರಯಾಣ ನಿಮಗೆ ಒಳ್ಳೆಯ ಅನುಭವ ನೀಡುತ್ತದೆ. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸಬೇಕಾಗುವುದು. ವಾತಕ್ಕೆ ಸಂಬಂಧಿಸಿದ ಖಾಯಿಲೆ ಕಾಣಿಸಿಕೊಳ್ಳುವುದು. ಭವಿಷ್ಯದ ಬಗ್ಗೆ ಚಿಂತೆ ಇದ್ದರೂ ಬಂದಂತೆ ಸ್ವೀಕರಿಸಬೇಕು ಎಂದು ನಿರ್ಧರಿಸುವಿರಿ. ಸಂಗಾತಿಯ ಮಾತಿನಿಂದ ಸಿಟ್ಟಾಗುವಿರಿ. ಇಂದು ಕಛೇರಿಯಲ್ಲಿ ನಿಮಗೆ ಸ್ವಲ್ಪ ಬಿಡುವುದು ಸಿಗಬಹುದು. ಓದುವಿಕೆ, ಸಂಶೋಧನೆ, ಬರಹ ಹೀಗೆ ಬುದ್ಧಿವಂತಿಕೆ ಕೆಲಸಗಳಲ್ಲಿ ಆಸಕ್ತಿ. ಹಿರಿಯರಿಂದ ಆದ ದೋಷವನ್ನು ಸರಿ ಮಾಡಿಕೊಳ್ಳುವಿರಿ.
*ಕುಂಭ ರಾಶಿ :*
ಧನ ಸಂಬಂಧಿತ ವಿಷಯಗಳಲ್ಲಿ ಸ್ಪಷ್ಟತೆ ಬರುತ್ತದೆ. ಹಳೆಯ ಉಳಿಕ, ಬಾಕಿ ವಿಷಯಗಳಲ್ಲಿ ಪರಿಹಾರ ಸಿಗುವ ದಿನ. ನಿಮ್ಮ ಇಂದಿನ ಯೋಜನೆಗಳು ತಲೆಕೆಳಗಾಗುವುದು. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಮನೆಯಲ್ಲಿ ಸಣ್ಣಪುಟ್ಟ ವಿಷಯಗಳ ಬಗ್ಗೆ ಚರ್ಚೆ ಉಂಟಾದರೂ ಅದು ಶಾಂತವಾಗಿ ಮುಗಿಯುತ್ತದೆ. ನಿಮ್ಮ ತಾಳ್ಮೆ ಮುಖ್ಯ ಶಕ್ತಿ. ಎಂದೋ ಕಳೆದುಕೊಂಡ ವಸ್ತುವು ಇಂದು ಪ್ರಾಪ್ತವಾಗುವುದು. ಹಣದ ಅಭಾವವಿದ್ದರೂ ಖರ್ಚನ್ನು ಮಾಡಬೇಕಾದ ಸ್ಥಿತಿಯು ಬರಬಹುದು. ಮನೆಯಿಂದ ದೂರವಿದ್ದು ಬೇಸರವಾಗಲಿದೆ. ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನಿಮಗೆ ಮುಜುಗರವಾದೀತು. ಆಸ್ತಿಯ ವಿಚಾರವಾಗಿ ಮನೆಯಲ್ಲಿ ವಾಗ್ವಾದ ಆಗಬಹುದು. ಜೊತೆಗಿರುವವರಿಂದ ಏನನ್ನಾದರೂ ನಿರೀಕ್ಷಿಸುವಿರಿ. ವ್ಯಾಪಾರವು ಸಾಧಾರಣವಾಗಿ ಇರಲಿದೆ.
*ಮೀನ ರಾಶಿ :*
ಹೊಸ ಉತ್ಸಾಹ, ಹೊಸ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚಾಗಿರುವ ದಿನ. ಕೆಲಸದಲ್ಲಿ ಹೊಣೆಗಾರಿಕೆ ಹೆಚ್ಚಾದರೂ ನೀವು ಅದನ್ನು ಸುಲಭವಾಗಿ ನಿರ್ವಹಿಸುತ್ತೀರಿ. ನಿಮ್ಮ ಕನಸುಗಳು ನನಸಾಗಿಸುವ ಸಮಯವನ್ನು ನಿರೀಕ್ಷಿಸುವಿರಿ. ಸಮಯವನ್ನು ವ್ಯರ್ಥ ಮಾಡಲು ಇಷ್ಟಪಡುವುದಿಲ್ಲ. ಯಾವ ಫಲಾಪೇಕ್ಷೆಯನ್ನೂ ಇಂದು ಇಟ್ಟುಕೊಳ್ಳಲಾರಿರಿ. ಕೆಲವು ನಿರ್ಧಾರಗಳಿಗೆ ಮನಶ್ಶಾಂತಿ ಅಗತ್ಯ. ಆತುರ ಬೇಡ. ಕುಟುಂಬದಲ್ಲಿ ಹಿರಿಯರ ಸಲಹೆ ಉಪಯೋಗ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲು ಆಸಕ್ತಿಯು ಕಡಿಮೆ ಇರುವುದು. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು. ವೃತ್ತಿಯಲ್ಲಿ ನಿಮ್ಮ ಸೇವೆಯು ಗಣನೀಯವಾಗಿರುವುದು. ನಿಮ್ಮನ್ನು ನಂಬಿಸಿ ಕೆಲಸವನ್ನು ಮಾಡಿಸಿಕೊಳ್ಳುವರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa