
ಢಾಕಾ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ-1 ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮಾನವೀಯತೆಯ ವಿರುದ್ಧದ ಅಪರಾಧ ಪ್ರಕರಣದಲ್ಲಿ ಮರಣದಂಡನೆ ವಿಧಿಸಿದ ನಂತರ ಬಾಂಗ್ಲಾದೇಶದಲ್ಲಿ ಅಶಾಂತಿ ಉಂಟಾಗಿದೆ.
ಢಾಕಾದ ಧನ್ಮೊಂಡಿ ಪ್ರದೇಶದಲ್ಲಿ ವಿದ್ಯಾರ್ಥಿ ಗುಂಪು ಶೇಖ್ ಮುಜಿಬುರ್ ರೆಹಮಾನ್ ಅವರ ಐತಿಹಾಸಿಕ ಮನೆಯನ್ನು ಧ್ವಂಸಗೊಳಿಸಲು ಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಬಳಕೆ ಮಾಡಿದರು. ಪರಿಸ್ಥಿತಿ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಸೇನೆ ನಿಯೋಜಿಸಲಾಗಿದೆ.
ತೀರ್ಪಿನ ನಂತರ ದೇಶದ ವಿವಿಧ ಭಾಗಗಳಲ್ಲಿ ಬಾಂಬ್ ಸ್ಫೋಟ, ಬೆಂಕಿ ಹಚ್ಚುವಿಕೆ ಮತ್ತು ವಾಹನ ದಹನದ ಘಟನೆಗಳು ನಡೆದಿದ್ದು 50 ಕ್ಕೂ ಹೆಚ್ಚು ಬಸ್ಸುಗಳಿಗೆ ಬೆಂಕಿ ಹಚ್ಚಲಾಗಿದೆ.
ಢಾಕಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ತೀರ್ಪನ್ನು ಸಂಭ್ರಮದಿಂದ ಸ್ವೀಕರಿಸಿದರೆ, ಮತ್ತೊಂದು ಗುಂಪು ಹಿಂಸಾತ್ಮಕ ಪ್ರತಿಭಟನೆ ಮುಂದುವರಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa