ಬಳ್ಳಾರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ
ಬಳ್ಳಾರಿ, 19 ನವೆಂಬರ್ (ಹಿ.ಸ.) : ಆ್ಯಂಕರ್ : ದೇಶದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ 108 ನೇ ಜಯಂತಿಯನ್ನು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು. ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಅವರ ನೇತೃತ್ವದಲ್ಲಿ ಇ
ಬಳ್ಳಾರಿ : ಇಂದಿರಾಗಾಂಧಿ ಅವರ ಜನ್ಮದಿನಾಚರಣೆ


ಬಳ್ಳಾರಿ : ಇಂದಿರಾಗಾಂಧಿ ಅವರ ಜನ್ಮದಿನಾಚರಣೆ


ಬಳ್ಳಾರಿ, 19 ನವೆಂಬರ್ (ಹಿ.ಸ.) :

ಆ್ಯಂಕರ್ : ದೇಶದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ 108 ನೇ ಜಯಂತಿಯನ್ನು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು.

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಅವರ ನೇತೃತ್ವದಲ್ಲಿ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಇಂದಿರಾ ಗಾಂಧಿ ಅವರ ಆಡಳಿತ, ಜನಪರ ಕಾಳಜಿ ಮತ್ತು ಪ್ರಧಾನಿಯಾಗಿ ವಿವಿಧ ಜನಪರ ಯೋಜನೆಗಳನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕಲ್ಲುಕಂಭ ಪಂಪಪಾತಿ, ಎಲ್. ಮಾರೆಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಹುಮಾಯೂನ್ ಖಾನ್ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande