
ಕಾರಟಗಿ, 19 ನವೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2025-26ನೇ ಸಾಲಿನ ``ಚಿಗುರು'' `ಇದು ಬಾಲ ಪ್ರತಿಭೆಗಳ ಸಾಂಸ್ಕೃತಿಕ ವೇದಿಕೆ' ಕಾರ್ಯಕ್ರಮವನ್ನು ನ. 21 ರಂದು ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಕಾರಟಗಿಯ ಶ್ರೀ ಶರಣಬಸವೇಶ್ವರ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ, ಸಮಾರಂಭದ ಅಧ್ಯಕ್ಷತೆ ವಹಿಸುವರು.
ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ, ಕೊಪ್ಪಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ. ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ತುಂಗಭದ್ರ ಯೋಜನೆ ಮುನಿರಾಬಾದ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್ ಸಾಬ್ ನಬೀಸಾಬ ದೋಟಿಹಾಳ, ಕಾರಟಗಿ ಪುರಸಭೆಯ ಅಧ್ಯಕ್ಷರಾದ ರೇಖಾ ರಾಜಶೇಖರ ಆನೆಹೊಸೂರು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಹಾಗೂ ಬಾಗಲಕೋಟೆ ಕೃಷ್ಣಾ ಮೇಲ್ದಂಡ ಯೋಜನೆಯ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಾದ ಅಮರ ಗುಂಡಪ್ಪ ಕಾರಟಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಬುರ್ಗಿ ವಿಭಾಗದ ವಲಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಕಾರಟಗಿ ತಹಶೀಲ್ದಾರ ಎಂ. ಕುಮಾರಸ್ವಾಮಿ, ಶರಣ ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಎಸ್.ಬಿ. ಶೆಟ್ಟರ್ ಹಾಗೂ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ ಸೋಮಲಾಪೂರ ಉಪಸ್ಥಿತರಿರುವರು.
ಸಾಂಸ್ಕೃತಿಕ ಕಾರ್ಯಕ್ರಮಗಳು : ಚಿಗುರು ಕಾರ್ಯಕ್ರಮದ ಅಂಗವಾಗಿ ಎಮ್.ಆರ್. ಅಮೀತ್ ಹಾಗೂ ಸಂಗಡಿಗರಿಂದ ಶಾಸ್ತ್ರೀಯ ಸಂಗೀತ, ವೈಷ್ಣವಿ ಕಮ್ಮಾರ ಹಾಗೂ ಸಂಗಡಿಗರಿಂದ ಸುಗಮ ಸಂಗೀತ, ನಯನ ಹಾಗೂ ಸಂಗಡಿಗರಿಂದ ಜಾನಪದ ಗೀತೆಗಳು, ರೂಪ ಹಾಗೂ ಸಂಗಡಿಗರಿಂದ ಸಮೂಹ ನೃತ್ಯ, ಅಸರ ಜರೀನ್ ಹಾಗೂ ಸಂಗಡಿಗರಿಂದ ಬಯಲಾಟ/ನಾಟಕ ಕಾರ್ಯಕ್ರಮ ಮತ್ತು ಮಲ್ಲಯ್ಯ ಬಸಲಿಂಗಯ್ಯ ಮೈಲಾಪೂರ ಅವರಿಂದ ಏಕಪಾತ್ರಾಭಿನಯ ಕಾರ್ಯಕ್ರಮ ನಡೆಯಲಿದೆ ಎಂದು ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಕರ್ಣಕುಮಾರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್