
ರಾಯಚೂರು, 19 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಅತಿಥಿ ಉಪನ್ಯಾಸಕಿ ಡಾ. ಪದ್ಮಜಾ ದೇಸಾಯಿ ಅವರು ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾದೆಮಿ(ರಿ)ಯು 2025-28ರ ಸಾಲಿನ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಮೂರು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹದಿನೆಂಟು ವರ್ಷಗಳಿಂದ ಇತಿಹಾಸ, ಪುರಾತತ್ವ, ನಾಣ್ಯಶಾಸ್ತ್ರ, ಶಾಸನಶಾಸ್ತ್ರ ಇವುಗಳ ಕುರಿತು ಸಂಶೋಧನೆಯನ್ನು ನಡೆಸಿ ಅನೇಕ ರಾಜ್ಯ, ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ಕಾರ್ಯಗಾರ ಸಮ್ಮೇಳನಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್