
ಹೂವಿನಹಡಗಲಿ, 19 ನವೆಂಬರ್ (ಹಿ.ಸ.) :
ಆ್ಯಂಕರ್ : ಹೂವಿನಹಡಗಲಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ರಾಷ್ಟ್ರೀಯ ಅಪಸ್ಮಾರ ದಿನಾಚರಣೆ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಮೆದುಳು ಉಪಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಡೆಯಲಿರುವ ರಾಷ್ಟ್ರೀಯ ಅಪಸ್ಮಾರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರನಾಯ್ಕ ಉದ್ಘಾಟಿಸಲಿದ್ದಾರೆ. ಹೂವಿನಹಡಗಲಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ನವೀನ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ರಾಧಿಕಾ ಪ್ರಾಸ್ತಾವಿಕ ನುಡಿಯಲಿದ್ದಾರೆ.
ಅತಿಥಿಗಳಾಗಿ ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಅನುಷ್ಠಾನ ಅಧಿಕಾರಿ ಡಾ.ವಿನಯ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಭಾಸ್ಕರ್.ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಸತೀಶ್‌ಚಂದ್ರ, ಹೂವಿನಹಡಗಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್, ಹೊಸಪೇಟೆ ತಾಲೂಕು ವೈದ್ಯಾಧಿಕಾರಿ ಡಾ.ವಿನೋದ್ ಮತ್ತು ಹೊಸಪೇಟೆ ಆಡಳಿತ ವೈದ್ಯಾಧಿಕಾರಿ ಡಾ.ಹರಿಪ್ರಸಾದ್ ಆಗಮಿಸಲಿದ್ದಾರೆ. ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಜಿಲ್ಲಾ ಸಂಯೋಜಕ ಆರ್.ಗಿರೀಶ್ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್