
ವಿಜಯಪುರ, 19 ನವೆಂಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ನಗರದ ನವನಗರ ಸೆಕ್ಟರ್ ನಂ.45ರ ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವುದು ಘಟನೆ ಬೆಳಕಿಗೆ ಬಂದಿದೆ. ಮೃತಳನ್ನು ಲಕ್ಷ್ಮಿ ಹುಲಗಪ್ಪ ಮಾದರ (21) ಎಂದು ಗುರುತಿಸಲಾಗಿದೆ.
ಆರು ತಿಂಗಳ ಹಿಂದೆ ಹುಲಗಪ್ಪ ಅವರೊಂದಿಗೆ ಲಕ್ಷ್ಮಿಯ ವಿವಾಹ ಆಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ನವನಗರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande