ಕೊಪ್ಪಳ : ರಾಷ್ಟ್ರೀಯ ಏಕತಾ ಪ್ರಮಾಣ ವಚನ
ಕಚೇರಿ
ಕೊಪ್ಪಳ : ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ


ಕೊಪ್ಪಳ : ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ


ಕೊಪ್ಪಳ, 19 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಏಕತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಬುಧವಾರ ರಾಷ್ಟ್ರೀಯ ಏಕತಾ ಪ್ರಮಾಣ ವಚನ ಸ್ವೀಕರಿಸಲಾಯಿತು.

ಪ್ರತಿ ವರ್ಷದಂತೆ ನವೆಂಬರ್ 19 ರಿಂದ ನ. 25 ರವರೆಗೆ ರಾಷ್ಟ್ರೀಯ ಏಕತಾ ಸಪ್ತಾಹವನ್ನು ಆಚರಿಸಲು ರಾಜ್ಯ ಸರ್ಕಾರವು ನಿರ್ಧರಿಸಿದಂತೆ ರಾಷ್ಟ್ರದ ಸ್ವಾತಂತ್ರ‍್ಯ ಹಾಗೂ ಏಕತೆಯನ್ನು ಬಲಪಡಿಸಲು. ದೇಶದಲ್ಲಿ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವುದಕ್ಕಾಗಿ ರಾಷ್ಟ್ರೀಯ ಏಕತಾ ಸಪ್ತಾಹದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೊಪ್ಪಳ ತಹಶಿಲ್ದಾರ ವಿಠಲ ಚೌಗಲಾ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande