ಎಸ್‌ಸಿಪಿ/ ಟಿಎಸ್‌ಪಿ ಪ್ರಗತಿ ಪರಿಶಿಲನಾ ಸಭೆ
ನಾನಾ
ಸಭೆ


ವಿಜಯಪುರ, 19 ನವೆಂಬರ್ (ಹಿ.ಸ.) :

ಆ್ಯಂಕರ್ : ಪ.ಜಾ/ಪ.ಪಂ. ಉಪಹಂಚಿಕೆ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆಮಾಡಿಕೊಂಡು ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಕಾಲಾವಧಿಯಲ್ಲಿಯೇ ದೊರಕುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ.ಜಾ/ಪ.ಪಂ. ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ನಿಗದಿಪಡಿಸಿದ ಅನುದಾನ ಲ್ಯಾಪ್ಸ್ ಆಗದಂತೆ ಪ್ರಗತಿ ಸಾಧಿಸಬೇಕು ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ಶೀಘ್ರಗತಿಯಲ್ಲಿ ತಲುಪುವಂತಾಗಬೇಕು.

ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಸಮರ್ಪಕ ಅನುಷ್ಠಾನಗೊಳಿಸುವಂತೆ ಸೂಚಿಸಿದರು.

ತೋಟಗಾರಿಕೆ ಇಲಾಖೆಯಡಿ ಯೋಜನೆ ಅನುಷ್ಠಾನಗೊಳಿಸಿ, ರೈತರು ಯೋಜನೆಯ ಮಾಹಿತಿ ಹೊಂದಿ, ಯೋಜನೆಯ ಸದುಪಯೋಗಪಡೆದುಕೊಂಡು ಆರ್ಥಿಕ ಸಬಲತೆ ಹೊಂದಲು ನೈಜ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ಲಾಭ ತಲುಪಿಸಿ ಎಂದು ಹೇಳಿದ ಅವರು, ಯೋಜನೆಯ ಸದುಪಯೋಗಪಡಿಸಿಕೊಂಡ ಯಶಸ್ವಿ ಫಲಾನುಭವಿಗಳನ್ನು ಗುರುತಿಸಿ ಎಂದು ಹೇಳಿದರು.

ನಾನಾ ಇಲಾಖೆಯಡಿಯ ಅನುಷ್ಠಾನಗೊಳಿಸುವ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸುವಂತೆ ಸೂಚಿಸಿದರು.ಮೀನುಗಾರರ ಸುರಕ್ಷತಾ ಸಲಕರಣೆಗಳನ್ನು ಒದಗಿಸಿ, ಅವರ ಬದುಕಿಗೆ ಸಹಾಯ ಒದಗಿಸಿಬೇಕು. ಬಲೆ ಮತ್ತು ಲೈವ್ ಜಾಕೆಟ್‌ ಒಳಗೊಂಡ ಗುಣಮಟ್ಟದ ಕಿಟ್ ಒದಗಿಸಲು ಕ್ರಮವಹಿಸುವಂತೆ ಸೂಚಿಸಲಾಯಿತು.

ಪ್ರತಿ ಗ್ರಾಮದ ಎಸ್ ಎಸ್ಟಿ ಕಾಲಿನಿಗಳ ಮನೆಗಳಿಗೆ ಮೀಟರ್ ಅಳವಡಿಸಿದ ಅಂಕಿ ಅಂಶಗಳ ಮಾಹಿತಿಯನ್ನು ಒದಗಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಈಗಾಗಲೇ ಕೊರೆದ ಕೊಳವೆ ಬಾವಿ ನಿಗದಿತ ಅವಧಿಯಲ್ಲಿ ವಿದ್ಯುತ್ ಸಂಪರ್ಕ ಒದಗಿಸಬೇಕು. ಮುಂಬರುವ ಸಭೆಯಲ್ಲಿ ವಿದ್ಯುತ್ ಸಂಪರ್ಕ ಒದಗಿಸಿರುವ ವರದಿ ನೀಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆಯಿಂದ ಅನುಷ್ಠಾನಗೊಳಿಸುವ ಪ್ರವಾಸ ದರ್ಶನ ಕಾರ್ಯಕ್ರಮವು ನಿಗದಿತ ಕಾಲಾವಧಿಯಲ್ಲಿ ಕಾರ್ಯಾಗತಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಅವರು ಸಭೆಗೆ ಮಾಹಿತಿ ನೀಡಿದರು.

ತೋಟಗಾರಿಕೆ, ಮೀನುಗಾರಿಕಾ, ಪಶುಸಂಗೋಪನಾ, ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹೆಸ್ಕಾಂ ಹಾಗೂ ಕೃಷಿ ಇಲಾಖೆ ಸೇರಿದಂತೆ ನಾನಾ ಇಲಾಖೆಯ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಘೋಣಸಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಕುಮಾರ ಗುಣಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚಹ್ವಾಣ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಸಿದ್ಧರಾಜು,ಕ್ರೀಡಾಧಿಕಾರಿ ರಾಜಶೇಖರ ದೈವಾಡಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸೇರಿದಂತೆ ನಾನಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande