ಕಂಬೈನ್ಡ್ ಹಾರ್ವೆಸ್ಟರ್ ಹಬ್ ಮತ್ತು ಶುಗರ್ ಕೇನ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ
ಹಾಸನ, 02 ನವೆಂಬರ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ 2025-26 ನೇ ಸಾಲಿನಲ್ಲಿ ಅಡಿ ಕೃಷಿಯಲ್ಲಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಹಾಗೂ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ವೈಯಕ್ತಿಕ ಫಲಾನುಭವಿ ರೈತರಿಂದ ಕಂಬೈ
ಕಂಬೈನ್ಡ್ ಹಾರ್ವೆಸ್ಟರ್ ಹಬ್ ಮತ್ತು ಶುಗರ್ ಕೇನ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ


ಹಾಸನ, 02 ನವೆಂಬರ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ 2025-26 ನೇ ಸಾಲಿನಲ್ಲಿ ಅಡಿ ಕೃಷಿಯಲ್ಲಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಹಾಗೂ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ವೈಯಕ್ತಿಕ ಫಲಾನುಭವಿ ರೈತರಿಂದ ಕಂಬೈನ್ಡ್ ಹಾರ್ವೆಸ್ಟರ್ ಹಬ್ ಮತ್ತು ಶುಗರ್ ಕೇನ್ (ಕಬ್ಬು) ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಸಾಮಾನ್ಯ ವರ್ಗ (ವೈಯಕ್ತಿಕ) ಘಟಕದಡಿ ಫಲಾನುಭವಿಗಳಿಗೆ ಶೇ.40 ರಷ್ಟು ಸಹಾಯಧನ ಇರುತ್ತದೆ. ಸಂಘ-ಸಂಸ್ಥೆ, ಪರಿಶಿಷ್ಟ ಜಾತಿ (ವೈಯಕ್ತಿಕ) ಮತ್ತು ಪರಿಶಿಷ್ಟ ಪಂಗಡದ (ವೈಯಕ್ತಿಕ) ರೈತರಿಗೆ ಶೇ.50 ರಷ್ಟು ಸಹಾಯಧನ ಇರುತ್ತದೆ. ಅರ್ಜಿಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande