
ಶಿವಮೊಗ್ಗ, 02 ನವೆಂಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26ನೇ ಸಾಲಿಗೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ‘ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಇತರ ಕಣ್ಣಿನ ಕಾಯಿಲೆಗಳ ಚಿಕಿತ್ಸಾ’ ಕಾರ್ಯಕ್ರಮಕ್ಕಾಗಿ ಆಸಕ್ತಿಯುಳ್ಳ ಹಾಗೂ ಅನುಭವವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ (ಎನ್‌ಜಿಓ) ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನ.06ರವರೆಗೆ ವಿಸ್ತರಣೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ವೆಬ್‌ಸೈಟ್ https://kppp.karnataka.gov.in/#/portal/portal-home ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ, ದೂ.ಸಂ.: 8197094440/08182-222382 ಗಳನ್ನು ಸಂಪರ್ಕಿಸುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa