
ಹುಬ್ಬಳ್ಳಿ, 02 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷಗಳಾದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವವನ್ನು ನವಂಬರ್ 4, 2025 ರಂದು ಮಧ್ಯಾಹ್ನ 2.30 ಗಂಟೆಗೆ ಹುಬ್ಬಳ್ಳಿ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa