
ಹಾಸನ, 02 ನವೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ತಾಲ್ಲೂಕು ವ್ಯಾಪ್ತಿಯ ಎಲ್ಲಾ ರೈತಾಪಿ ವರ್ಗದವರಿಗೆ ಸಾರ್ವಜನಿಕ ಹಾಗೂ ಜನತೆಗೆ ಸಾಮಾಜಿಕ ಶೈಕ್ಷಣಿಕ ಹಾಗೂ ಕೃಷಿ ಚಟುವಟಿಕೆಗಳಿಗೆ ಇಲಾಖೆಗಳಲ್ಲಿ ದೊರೆಯಬೇಕಾದ ಸೌಲಭ್ಯಗಳು ನಿಗಧಿತ ಅವಧಿಯೊಳಗೆ ದೊರೆಯದೇ ಇದ್ದಾಗ ತಮ್ಮ ಅಹವಾಲನ್ನು ಸ್ವೀಕರಿಸಲು ಸರ್ಕಾರ ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ರಾ0ಶದಲ್ಲಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದ್ದು ಸಾ ರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಲು ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಒಂದೆಡೆ ಇರುವುದರಿಂದ ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ನೇರವಾಗಿ ತಮ್ಮ ಅಹವಾಲನ್ನು ದಾಖಲಿಸಲು ತಾಲ್ಲೂಕು ಮಟ್ಟದಲ್ಲಿ ನ.03 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಹಾಸನ ಇಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದು ಸದರಿ ದಿನದಂದು ಸಾರ್ವಜನಿಕರು ಖುದ್ದು ಹಾಜರಾಗಿ ತಮ್ಮ ಅಹವಾಲನ್ನು ಸಲ್ಲಿಸಲು ಹಾಸನ ತಾಲ್ಲೂಕು ತಹಸೀಲ್ದಾರ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa