
ಚಿತ್ರದುರ್ಗ, 2 ನವೆಂಬರ್ (ಹಿ.ಸ.) :
ಆ್ಯಂಕರ್ : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಇದೇ ನ.04ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ “ಕನಕ-ಸಂಸ್ಕೃತಿ-ಸಂಚಲನ” ಕಾರ್ಯಕ್ರಮದ ಅಂತಿಮ ಘಟ್ಟವಾದ ಕನಕ ನಡೆ-ನುಡಿ ಉತ್ಸವ ಏರ್ಪಡಿಸಲಾಗಿದೆ.
ಕನಕ ನಡೆ-ನುಡಿ ಉತ್ಸವವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ ತ ಚಿಕ್ಕಣ್ಣ ಉದ್ಘಾಟನೆ ಮಾಡುವರು. ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ ಅಧ್ಯಕ್ಷತೆ ವಹಿಸುವರು. ಐಕ್ಯೂಎಸಿ ಸಂಚಾಲಕಿ ಪ್ರೊ.ತಾರಿಣಿ ಶುಭದಾಯಿನಿ, ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ.ಬಿ.ಸುರೇಶ್, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಮಂಜುನಾಥ, ಪತ್ರಾಂಕಿತ ವ್ಯವಸ್ಥಾಪಕ ಮಾರ್ಟಿನ್ ಸ್ಯಾಮ್ಯುಯಲ್ ಉಪಸ್ಥಿತಿವಹಿಸುವರು.
ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಯಶೋಧರಮ್ಮ ಬೋರಮ್ಮ ಮಹಿಳಾ ಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆಯ ಹೆಚ್‍ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಹಿರಿಯೂರಿನ ವಾಣಿ ಸಕ್ಕರೆ ಪ್ರಥಮ ದರ್ಜೆ ಸೇರಿದಂತೆ ಒಟ್ಟು ಆರು ಕಾಲೇಜುಗಳು ಭಾಗವಹಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa