
ಕೊಪ್ಪಳ, 02 ನವೆಂಬರ್ (ಹಿ.ಸ.) :
ಆ್ಯಂಕರ್ : ಚುಟುಕು ಸಾಹಿತ್ಯ ಪರಿಷತ್ ನವಂಬರ್ 9 ರಂದು ರಂದು ಹಮ್ಮಿಕೊಂಡಿರುವ 11ನೆಯ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ವಿಧಾನ ಪರಿಷತ್ತಿನ ಸದಸ್ಯೆ ಹೇಮಲತಾ ನಾಯಕ ಅವರು ಕರೆ ನೀಡಿದ್ದಾರೆ.
ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕವು ಹಮ್ಮಿಕೊಂಡಿರುವ ಜಿಲ್ಲಾ ಚುಟುಕು ಸಾಹಿತ್ಯದ 11ನೆಯ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಸರ್ಕಾರಿ ಅನುದಾನವಿಲ್ಲದೇ ನಿರಂತರ ಚಟುವಟಿಕೆಗಳ ಮೂಲಕ ಅಕ್ಷರದ ಬೀಜವನ್ನು ಬಿತ್ತುವ ಚಟುವಟಿಕೆಗಳು ಸ್ವಾಗತಾರ್ಹ ಎಂದರು.
ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ರುದ್ರಪ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿ ಡಾ. ಮಹಾಂತೇಶ್ ನೆಲಾಗಣಿ, ಕೊಪ್ಪಳ ತಾಲೂಕು ಅಧ್ಯಕ್ಷ ಮೈಲಾರಪ್ಪ ಉ0ಕಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ಹಾದಿಮನಿ, ಹಿರಿಯ ಕವಯಿತ್ರಿ ಪುಷ್ಪಲತಾ ಏಳುಭಾವಿ ಅವರು ಈ ಸಂದರ್ಭದಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್