
ಹಾಸನ, 02 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹಾಸನ ಜಿಲ್ಲೆಯಲ್ಲಿ ದಿನಾಂಕ:22-09-2025 ರಂದು ಪ್ರಾರಂಭಿಸಲಾಗಿದ್ದು, ದಿನಾಂಕ:31-10-2025 ರಂದು ಮುಕ್ತಾಯಗೊಂಡಿದ್ದು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ Online Website: https://kscbcselfdeclaration.karnataka.gov.in ಮೂಲಕ ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ನ.10 ರವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa