ವಿಜ್ಞಾನ-ತಂತ್ರಜ್ಞಾನ ನಾವೀನ್ಯತೆ ಸಮಾವೇಶಕ್ಕೆ ಸೋಮವಾರ ಚಾಲನೆ
ನವದೆಹಲಿ, 02 ನವೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ “ಉದಯೋನ್ಮುಖ ವಿಜ್ಞಾನ ಮತ್ತು ತಂತ್ರಜ್ಞಾನ ನಾವೀನ್ಯತೆ ಸಮಾವೇಶ 2025” ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ದೇಶದ ಖಾಸಗಿ ವಲಯದ ಸಂಶೋಧನೆ ಮತ್ತು ನಾವೀನ್ಯತೆ ಉತ್ತ
ವಿಜ್ಞಾನ-ತಂತ್ರಜ್ಞಾನ ನಾವೀನ್ಯತೆ ಸಮಾವೇಶಕ್ಕೆ ಸೋಮವಾರ ಚಾಲನೆ


ನವದೆಹಲಿ, 02 ನವೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ “ಉದಯೋನ್ಮುಖ ವಿಜ್ಞಾನ ಮತ್ತು ತಂತ್ರಜ್ಞಾನ ನಾವೀನ್ಯತೆ ಸಮಾವೇಶ 2025” ಅನ್ನು ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ದೇಶದ ಖಾಸಗಿ ವಲಯದ ಸಂಶೋಧನೆ ಮತ್ತು ನಾವೀನ್ಯತೆ ಉತ್ತೇಜನಕ್ಕಾಗಿ ₹1 ಲಕ್ಷ ಕೋಟಿ ರೂಪಾಯಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ಯೋಜನೆಗೆ ಚಾಲನೆ ನೀಡಲಾಗುತ್ತದೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.

ನವೆಂಬರ್ 3ರಿಂದ 5ರವರೆಗೆ ನಡೆಯುವ ಈ ಸಮಾವೇಶದಲ್ಲಿ ಭಾರತ ಹಾಗೂ ವಿದೇಶಗಳಿಂದ 3,000 ಕ್ಕೂ ಹೆಚ್ಚು ವಿಜ್ಞಾನಿಗಳು, ಸಂಶೋಧಕರು ಮತ್ತು ಉದ್ಯಮ ತಜ್ಞರು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಕೃತಕ ಬುದ್ಧಿಮತ್ತೆ, ಕ್ವಾಂಟಮ್ ತಂತ್ರಜ್ಞಾನ, ಕೃಷಿ ಮತ್ತು ಆರೋಗ್ಯ ತಂತ್ರಜ್ಞಾನ ಸೇರಿದಂತೆ 11 ಪ್ರಮುಖ ಕ್ಷೇತ್ರಗಳ ಚರ್ಚೆ ಮತ್ತು ಪ್ರದರ್ಶನಗಳು ನಡೆಯಲಿವೆ.

ಈ ಸಮಾವೇಶವು ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande