ಶನಿವಾರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 17ನೇ ಸಂಸ್ಥಾಪನಾ ದಿನಾಚರಣೆ
ರಾಯಚೂರು, 20 ನವೆಂಬರ್ (ಹಿ.ಸ.) : ಆ್ಯಂಕರ್ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 17ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಶ್ರೀ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ನವೆಂಬರ್ 22 ರಂದು ಶನಿವಾರ ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ.
ಶನಿವಾರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 17ನೇ ಸಂಸ್ಥಾಪನಾ ದಿನಾಚರಣೆ


ರಾಯಚೂರು, 20 ನವೆಂಬರ್ (ಹಿ.ಸ.) :

ಆ್ಯಂಕರ್ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 17ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಶ್ರೀ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ನವೆಂಬರ್ 22 ರಂದು ಶನಿವಾರ ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ.

ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸುಲು ಐ.ಎಫ್.ಎಸ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಂ. ಹನುಮಂತಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರು ಆಗಿರುವ ವಿಧಾನ ಪರಿಷತ್ ಸದಸ್ಯರಾದ ಶರಣಗೌಡ ಪಾಟೀಲ್ ಬಯ್ಯಾಪೂರ, ಕರ್ನಾಟಕ ಸರ್ಕಾರದ ಅರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಿತೀಶ್ ಕುಮಾರ್ ಸಿಂಗ್, ಸರ್ಕಾರದ ಅರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್ ಸೆಲ್ವಕುಮಾರ, ಕರ್ನಾಟಕ ಸರ್ಕಾರದ ತೋಟಗಾರಿಕೆ ಮತ್ತು ರೇಷ್ಮ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಶಮ್ಲಾ ಇಕ್ಯಾಲ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಯ ಗೌರವಾನ್ವಿತ ಸದಸ್ಯರು ಆಗಿರುವ ಮಾಜಿ ವಿಧಾನಸಭೆ ಸದಸ್ಯರಾದ ಬಸನಗೌಡ ಬ್ಯಾಗವಾಟ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಯ ಗೌರವಾನ್ವಿತ ಸದಸ್ಯರಾದ ಮಲ್ಲಿಕಾರ್ಜುನ ಡಿ., ಮಲ್ಲೇಶ್ ಕೊಲಿಮಿ, ಮಧುಸೂಧನ್ ರೆಡ್ಡಿ, ತಿಮ್ಮಣ್ಣ ಸೋಮಪ್ಪ ಚಾವಡಿ, ಭಾರತದ ಕೃಷಿ ಸಂಘ ಸಂಸ್ಥೆ ನವದೆಹಲಿಯ ನಿರ್ದೇಶಕರಾದ ಡಾ.ಶ್ರೀನಿವಾಸ ರಾವ್ ಚರುಕಮಲ್ಲಿ, ಕೃಷಿ ಮಂಡಳಿಯ ವಿಭಾಗದ ಡೀನ್ ಡಾ.ಕೆ.ನಾರಾಯಣ ರಾವ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಯ ಗೌರವಾನ್ವಿತ ಸದಸ್ಯ ಕಾರ್ಯದರ್ಶಿಗಳು ಹಾಗೂ ಕುಲಸಚಿವರಾದ ಶರಣಬಸಪ್ಪ ಕೋಟೆಪ್ಪಗೋಳ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರಾದ ಡಾ. ಎಂ. ಹನುಮಂತಪ್ಪ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರಾದ ಡಾ. ಎ. ಅಮರೇಗೌಡ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಡೀನ್‍ರಾದ ಡಾ. ಗುರುರಾಜ ಸುಂಕದ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿಯ ಡೀನ್‍ರಾದ ಡಾ. ಯು. ಸತೀಶಕುಮಾರ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಕೃಷಿ ಮಂಡಳಿಯ ವಿಭಾಗದ ಡೀನ್‍ರಾದ ಡಾ.ಕೆ.ನಾರಾಯಣ ರಾವ್, ಕೃಷಿ ತಾಂತ್ರಿಕ ಮಂಡಳಿಯ ಡೀನ್‍ರಾದ ಡಾ. ಮಲ್ಲಿಕಾರ್ಜುನ್ ಅಯ್ಯನ್‍ಗೌಡರ್, ಕಲಬುರಗಿ ಡೀನ್‍ರಾದ ಡಾ. ಎಸ್.ಬಿ. ಗೌಡಪ್ಪ, ಡೀನ್‍ರಾದ ಡಾ. ಪಿ. ಹೆಚ್. ಕುಚನೂರು, ಗಂಗಾವತಿಯ ಕೃಷಿ ಮಂಡಳಿಯ ವಿಭಾಗದ ವಿಶೇಷ ಅಧಿಕಾರಿಗಳಾದ ಡಾ. ಎಸ್. ಟಿ. ಯಂಜೀರಪ್ಪ, ಹಗರಿಯ ಪ್ರಭಾರ ಅಧಿಕಾರಿಗಳಾದ ಡಾ. ಜಿ. ರವಿಶಂಕರ, ಅಡಕತಾಧಿಕಾರಿಗಳಾದ ಡಾ. ಜಾಗೃತಿ ಬಿ. ದೇಶಮಾನ್ಯ, ಆಸ್ತಿ ಅಧಿಕಾರಿಗಳಾದ ರವಿ ಮೆಸ್ತಾ, ಹಣಕಾಸು ನಿಯಂತ್ರಣಾಧಿಕಾರಿಗಳಾದ ಹನುಮೇಶ್ ನಾಯಕ್, ಗ್ರಂಥಪಾಲಕರಾದ ಡಾ. ಮಚೇಂದ್ರನಾಥ ಎಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande