
ಕೋಲಾರ, ೨೦ ನವಂಬರ್ (ಹಿ.ಸ.) :
ಆ್ಯಂಕರ್ : ಕೆಜಿಎಫ್ ಪೊಲೀಸ್ ಜಿಲ್ಲೆಯ ೨೦೨೫ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಗುರುವಾರದಂದು ಉದ್ಘಾಟನೆ ಮಾಡಲಾಯಿತು. ಕೆಜಿಎಫ್ನ ಚಾಂಫೀಯನ್ರೀಫ್ಸ್ನಲ್ಲಿನ ಡಿ.ಎ. ಆರ್. ಪೊಲೀಸ್ ಕವಾಯಿತು ಮೈದಾನದಲ್ಲಿ ಗುರುವಾರದಿಂದ ಮೂರು ದಿನಗಳ ಕಾಲ ನಡೆ ಯಲಿರುವ ವಾರ್ಷಿಕ ಪೊಲೀಸ್ ಕ್ರೀಡಾಕೂಟ ವನ್ನು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಕೋಲಾರದ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಪೊಲೀಸರು ಕಾನೂನು ಸುವ್ಯವಸ್ಥೆ ಅಡಿಯಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸುವ ಮಧ್ಯೆ ಮನೋವಿಕಾಸಕ್ಕಾಗಿ ವರ್ಷಕ್ಕೊಮ್ಮೆ ಕ್ರೀಡಾಕೂಟವನ್ನು ನಡೆಸುತ್ತಿದ್ದು, ಪೊಲೀಸರು ಕರ್ತವ್ಯದ ಒತ್ತಡಗಳಲ್ಲಿ ಮಾನಸಿಕ ಮತ್ತು ದೈಹಿಕ ಸಮತೋಲನವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಆಯೋಜಿಸಿರುವ ೦೩ ದಿನಗಳ ಕ್ರೀಡಾಕೂಟದಲ್ಲಿ ಎಲ್ಲರೂ ಅತ್ಯಂತ ಉತ್ಸಾಹ ಮತ್ತು ಉಮ್ಮಸ್ಸಿನಿಂದ ಭಾಗವಹಿಸಿ ಭಾವನೆಗಳ ಮೇಲೆ ಹಿಡಿತವನ್ನು ಸಾಧಿಸಲು ಹಾಗೂ ದಿನನಿತ್ಯ ಕರ್ತವ್ಯಗಳಲ್ಲಿ ಚೇತೋಹಾರಿಯಾಗಿ ತೊಡಗಿಕೊಳ್ಳಲು ಕ್ರೀಡೆಗಳು ಸಹಾಯಕ ಮತ್ತು ಸ್ಪೂರ್ತಿದಾಯಕವೆಂದು ಹಾಗೂ ಪೊಲೀಸರು ತಮ್ಮ ಕುಟುಂಬದ ಸದಸ್ಯರುಗಳೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಕೌಟುಂಬಿಕ ಭಾಂದವ್ಯವನ್ನು ಬೆಳಸಿಕೊಳ್ಳವ ಮೂಲಕ ಜಿಲ್ಲೆಯ ಘನತೆ ಮತ್ತು ಕ್ರೀಡಾ ಗೌರವವನ್ನು ಎತ್ತಿಹಿಡಿಯಬೇಕೆಂದು ಕರೆ ನೀಡಿದರು.
ಕ್ರೀಡಾಕೂಟಕ್ಕೆ ಪೊಲೀಸ್ ಅಧೀಕ್ಷಕರಾದ ಶಿವಾಂಶು ರಜಪೂತ್ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸರ ಮಕ್ಕಳು ಸಕ್ರಿಯವಾಗಿ ಭಾಗವಹಿಸಿದ್ದರು. ೧೦೦ ಮೀಟರ್ ಓಟದ ಸ್ಪರ್ಧೆಗೆ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕೋಲಾರದ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರು ಚಾಲನೆ ನೀಡಿದರು. ಡಿವೈಎಸ್ಪಿ ವಿ.ಲಕ್ಷ್ಮಯ್ಯ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ, ವಿವಿಧ ಇಲಾಖಾಧಿಕಾರಿಗಳು, ಪತ್ರಕರ್ತರು, ಗಣ್ಯರು ಭಾಗವಹಿಸಿದ್ದರು.
ಕ್ರೀಡಾಕೂಟದ ಜ್ಯೋತಿಯನ್ನು ಸಿಪಿಸಿ ಸತ್ಯ.ಪಿ ಅವರು ಹೊತ್ತು ಆಕರ್ಷಕ ರೀತಿಯಲ್ಲಿ ಸಂಚರಿಸಿದರು. ಕ್ರೀಡಾಕೂಟದಲ್ಲಿ ಆರ್.ಪಿ.ಐ. ವಿ.ಸೋಮಶೇಖರ ಅವರ ನೇತೃತ್ವದಲ್ಲಿ ಅತ್ಯುತ್ತಮ ರೀತಿಯಲ್ಲಿ, ಪಥಸಂಚಲನ ನಡೆಯಿತು. ಕ್ರೀಡಾ ತಂಡಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರವಾಯಿತು.
ಚಿತ್ರ : ಕೆಜಿಎಫ್ನ ಚಾಂಫೀಯನ್ರೀಫ್ಸ್ನಲ್ಲಿನ ಡಿ.ಎ. ಆರ್. ಪೊಲೀಸ್ ಕವಾಯಿತು ಮೈದಾನದಲ್ಲಿ ಗುರುವಾರದಿಂದ ಮೂರು ದಿನಗಳ ಕಾಲ ನಡೆ ಯಲಿರುವ ವಾರ್ಷಿಕ ಪೊಲೀಸ್ ಕ್ರೀಡಾಕೂಟ ವನ್ನು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್